ಮಾನ್ವಿ: ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ವತಿಯಿಂದ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಕ್ಷದ ಮಂಡಲ ಅಧ್ಯಕ್ಷ ಜೆ.ಸುಧಾಕರ ಮಾತನಾಡಿ, ‘ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಹೆಸರಿನಲ್ಲಿ ರೈತರ, ಧಾರ್ಮಿಕ ಕ್ಷೇತ್ರಗಳ, ಮಠಗಳು ಸೇರಿದಂತೆ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಸುತ್ತಿದೆ. ಬಡವರ ಪಡಿತರ ಕಾರ್ಡ್‌ಗಳನ್ನು ರದ್ದುಪಡಿಸಿ ಅನ್ಯಾಯ ಮಾಡುತ್ತಿದೆ’ ಎಂದು ದೂರಿದರು.
‘ರಾಜ್ಯ ಸರ್ಕಾರ ರೈತರ ಪಹಣಿಯ 11ನೇ ಕಾಲಂನಲ್ಲಿ ನಮೂದಿಸಿರುವ ವಕ್ಫ್ ಹೆಸರನ್ನು ರದ್ದುಪಡಿಸಬೇಕು. ಜನವಿರೋಧಿ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿಗೆ ಬರೆದ ಮನವಿಪತ್ರವನ್ನು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಸಲ್ಲಿಸಲಾಯಿತು.
ಬಿಜೆಪಿಯ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.