ADVERTISEMENT

‘ಪ್ರತಿ ತಾಲ್ಲೂಕಿನಲ್ಲಿ ಬಯಲು ರಂಗ ಮಂದಿರ ನಿರ್ಮಿಸಿ’

ರಾಯಚೂರು ಜಿಲ್ಲಾ ಜಾನಪದ ಸಮ್ಮೇಳನಾಧ್ಯಕ್ಷ ಪ್ರಕಾಶ ಖೇಣದ ಮನವಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2024, 16:18 IST
Last Updated 10 ನವೆಂಬರ್ 2024, 16:18 IST
ಪ್ರಕಾಶ ಖೇಣದ
ಪ್ರಕಾಶ ಖೇಣದ   

ದೇವದುರ್ಗ: ‘ಜಾನಪದ ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರತಿ ತಾಲ್ಲೂಕಿನಲ್ಲೂ ಬಯಲು ರಂಗ ಮಂದಿರ ನಿರ್ಮಾಣ ಮಾಡಬೇಕು. ತೆರೆಮರೆಯಲ್ಲಿ ಕಲಾ ಸೇವೆಯಲ್ಲಿ ತೊಡಗಿರುವ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಬೇಕು‘ ಎಂದು ರಾಯಚೂರು ಜಿಲ್ಲಾ ಜಾನಪದ ಸಮ್ಮೇಳನಾಧ್ಯಕ್ಷ ಪ್ರಕಾಶ ಖೇಣದ ಮನವಿ ಮಾಡಿದರು.

ಪಟ್ಟಣದ ಮುರಿಗೆಪ್ಪ ಖೇಣದ್ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ಆವರಣದಲ್ಲಿ ಕರ್ನಾಟಕದ ಜಾನಪದ ಪರಿಷತ್ ವತಿಯಿಂದ ಭಾನುವಾರ ಆಯೋಜಿಸಿದ್ದ 2 ನೇ ಜಿಲ್ಲಾ ಜಾನಪದ ಸಮ್ಮೇಳನದಲ್ಲಿ ಮಾತನಾಡಿದರು.

‘ಜನಪದ ನಾಗರಿಕ ಸಂಸ್ಕೃತಿಯ ತಾಯಿಬೇರು ಇದ್ದಂತೆ. ವಿವಿಧ ಜನಾಂಗಗಳಲ್ಲಿ ನಡೆದುಕೊಂಡು ಬಂದಿರುವ ಧಾರ್ಮಿಕ, ಪಾರಂಪರಿಕ ಆಚರಣೆಗಳನ್ನು ಯಾವ ಕಾರಣಕ್ಕೂ ನಿರ್ಲಕ್ಷಿಸುವಂತಿಲ್ಲ’

ADVERTISEMENT

‘ಜನಪದ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದು, ಅದನ್ನು ಮುಂದುವರಿಸಿಕೊಂಡು ಹೋಗುವುದು ಪ್ರತಿಯೊಬ್ಬರ ಹೊಣೆಯಾಗಿದೆ’ ಎಂದು ತಿಳಿಸಿದರು.

‘ಸರ್ಕಾರಿ ಸಂಸ್ಥೆಗಳು, ಅಕಾಡೆಮಿಗಳು, ಪರಿಷತ್ತುಗಳು, ಜಾನಪದ ಸಾಹಿತ್ಯ ಮತ್ತು ಸಂಸ್ಕೃತಿಗೆ ಹೊಸ ರೂಪಕೊಟ್ಟು ಆಧುನಿಕತೆಯನ್ನು ಮೆರಯಬೇಕಾಗಿದೆ. ಈ ದಿಸೆಯಲ್ಲಿ ಕಮ್ಮಟಗಳನ್ನು ಆಯೋಜಿಸಿ ಇಂದಿನ ಕಲಾವಿದರಿಗೆ ಮಾರ್ಗದರ್ಶನ ನೀಡುವ ಅಗತ್ಯವಿದೆ‘ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.