ಸಿಂಧನೂರು: ಮುಂದೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಹಿಂಬದಿಯಿಂದ ಬಂದ ಇನ್ನೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಗಾಯವಾಗಿರುವ ಘಟನೆ ಈಚೆಗೆ ನಡೆದಿದೆ.
ನಗರದ ಇಂಡಿಯನ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಈ ಅಪಘಾತ ನಡೆದಿದೆ. ಡಿವೈಡರ್ ಬಳಿ ತಿರುಗಿಸುತ್ತಿದ್ದ ವೇಳೆ ಸಾರಿಗೆ ಬಸ್ ಏಕಾಏಕಿ ಬ್ರೇಕ್ ಹಾಕಿದೆ. ಈ ವೇಳೆ ಅದೇ ಬಸ್ಸಿನ ಹಿಂಭಾಗದಲ್ಲಿ ಬರುತ್ತಿದ್ದ ಮತ್ತೊಂದು ಬಸ್ಸಿನ ಚಾಲಕನಿಗೆ ಡಿಕ್ಕಿ ಹೊಡೆದಿದ್ದಾನೆ.
ಬಸ್ ಚಾಲಕ ಗಾಯಗೊಂಡಿದ್ದು, ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನೆ ನಂತರ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಿ ಬಸ್ಗಳನ್ನು ವಾಪಸ್ ಕಲಬುರಗಿ ಘಟಕಕ್ಕೆ ಕಳುಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.