ADVERTISEMENT

ಲಿಂಗಸುಗೂರು | ಸಮಾಜ ಕಲ್ಯಾಣ ಇಲಾಖೆ ಅವ್ಯವಸ್ಥೆಯ ಆಗರ: ಬಸವರಾಜ ಮರಳಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 14:24 IST
Last Updated 9 ಜುಲೈ 2024, 14:24 IST
ಬಸವರಾಜ ಮರಳಿ
ಬಸವರಾಜ ಮರಳಿ   

ಲಿಂಗಸುಗೂರು: ‘ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ವಸತಿ ನಿಲಯಗಳನ್ನು ನಿರ್ವಹಣೆ ಮಾಡುತ್ತಿಲ್ಲ. ಪರಿಶಿಷ್ಟರಿಗೆ ಸೌಲಭ್ಯಗಳನ್ನು ತಲುಪಿಸುತ್ತಿಲ್ಲ. ಇಲಾಖೆ ಅವ್ಯವಸ್ಥೆಯ ಆಗರವಾಗಿದೆ’ ಎಂದು ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಮರಳಿ ಆರೋಪಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಪರಿಶಿಷ್ಟರ ಕಲ್ಯಾಣ ಹಾಗೂ ವಸತಿ ನಿಲಯಗಳ ನಿರ್ವಹಣೆಗೆ ಇಲಾ ಖೆಗೆ ಕೋಟ್ಯಂತರ ರೂಪಾಯಿ ಹಣ ಬರುತ್ತಿದೆ. ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ, ಗುಣಮಟ್ಟದ ಊಟ ನೀಡ ದೆ ಅಧಿಕಾರಿಗಳು ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.

‘ವಸತಿ ನಿಲಯಗಳ ಮೇಲ್ವಿಚಾರಕರು ಕೇಂದ್ರ ಸ್ಥಳದಲ್ಲಿ ಮನೆ ಮಾಡದೆ ದೂರದ ಪಟ್ಟಣಗಳಲ್ಲಿ ಮನೆ ಮಾಡಿದ್ದಾರೆ. ವಸತಿ ನಿಲಯಗಳಿಗೆ ಭೇಟಿ ನೀಡುತ್ತಿಲ್ಲ’ ಎಂದು ಆಪಾದಿಸಿದರು.

ADVERTISEMENT

‘2020ರಲ್ಲಿ ಶಿರಡಿ ಸಾಯಿ ಎಂಬ ಸಂಸ್ಥೆಗೆ ಗುಣಮಟ್ಟದ ಆಹಾರ ಸಾಮಗ್ರಿ ಪೂರೈಕೆಗೆ ಟೆಂಡರ್ ನೀಡಲಾಗಿತ್ತು. ಅಂದಿನ ದರ ಪರಿಶೀಲಿಸಿದರೆ ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಕಡಿಮೆ ಇದೆ. ಇಷ್ಟೊಂದು ಕಡಿಮೆ ದರದಲ್ಲಿ ಆಹಾರ ಪದಾರ್ಥ ಪೂರೈಕೆ ಹೇಗೆ ಸಾಧ್ಯ?. ಈ ಕುರಿತು ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.