ADVERTISEMENT

ರಾಯಚೂರು: ಮೋದಿಗೆ ಸಂವಿಧಾನ ಗೊತ್ತಿಲ್ಲ; ಪ್ರಚಾರಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ‘

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2024, 15:59 IST
Last Updated 28 ಏಪ್ರಿಲ್ 2024, 15:59 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ರಾಯಚೂರು: ‘ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿರುವುದನ್ನು ಸುಪ್ರಿಂಕೋರ್ಟ್ ಒಪ್ಪಿದೆ. ಪದೇ ಪದೇ ದೇಶದ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ.ಮೋದಿಗೆ ಸಂವಿಧಾನ ಗೊತ್ತಿಲ್ಲ, ಇಲ್ಲಾ ಗೊತ್ತಿದ್ರೂ ಸುಳ್ಳು ಹೇಳುತ್ತಿದ್ದಾರೆ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸಿಂಧನೂರಿನ ಜ್ಯೂನಿಯರ್‌ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ನಮ್ಮ ಸಂವಿಧಾನ, ಸಾಮಾಜಿಕ ನ್ಯಾಯ ಬಗ್ಗೆ ಬಿಜೆಪಿಗೆ ಗೌರವವಿಲ್ಲ. ಮಹಿಳೆಯರಿಗೆ ಮೀಸಲಾತಿ, ಹಿಂದುಳಿದವರಿಗೆ, ಮುಸ್ಮರಿಗೆ ಮೀಸಲಾತಿ ಕೊಟ್ಟಿದ್ದು ಯಾರು ಎನ್ನುವುದೂ ಬಿಜೆಪಿಗೆ ಗೊತ್ತಿಲ್ಲ‘ ಎಂದು ಟೀಕಿಸಿದರರು.

ADVERTISEMENT

ಆರ್‌ಎಸ್‌ಎಸ್‌ನ ರಾಮಾ ಜೋಯಿಸ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಸುಪ್ರಿಂ ಕೋರ್ಟ್ ಅದೃಷ್ಟವಶಾತ್ ತಿರಸ್ಕಾರ ಮಾಡಿತು.

ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿರುವುದನ್ನು ಸುಪ್ರಿಂ ಕೊರ್ಟ್ ಒಪ್ಪಿದೆ‘ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.