ADVERTISEMENT

ಸಿಂಧನೂರು | ಆಸ್ತಿ ತೆರಿಗೆಯಲ್ಲಿ ರಿಯಾಯಿತಿ: ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 14:10 IST
Last Updated 4 ಜುಲೈ 2024, 14:10 IST
ಮಂಜುನಾಥ ಗುಂಡೂರು
ಮಂಜುನಾಥ ಗುಂಡೂರು   

ಸಿಂಧನೂರು: ಸಿಂಧನೂರು ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿ ಉತ್ತೇಜಿಸುವ ನಿಟ್ಟಿನಲ್ಲಿ ಆರ್ಥಿಕ ವರ್ಷ ಪ್ರಾರಂಭವಾದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇ 5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ರಾಜ್ಯ ಸರ್ಕಾರ ಜುಲೈ31 ರವರೆಗೆ ವಿಸ್ತರಿಸಿದೆ ಎಂದು ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು ತಿಳಿಸಿದ್ದಾರೆ.

ಗುರುವಾರ ಹೇಳಿಕೆ ನೀಡಿರುವ ಅವರು, ಸಿಂಧನೂರು ನಗರದ ಎಲ್ಲ ಆಸ್ತಿ ಮಾಲೀಕರು ರಿಯಾಯಿತಿಯ ಸದುಪಯೋಗ ಪಡೆದುಕೊಳ್ಳಬೇಕು. 31 ರೊಳಗೆ ಮಾಲೀಕರು ತಮ್ಮ ಆಸ್ತಿ ತೆರಿಗೆಯನ್ನು ಪಾವತಿಸಿದ್ದಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಆಸ್ತಿ ತೆರಿಗೆ ಮೇಲೆ ಶೇ 5 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕರು ಈ ಅವಕಾಶವನ್ನು ಬಳಸಿ ಆಸ್ತಿ ತೆರಿಗೆ ಪಾವತಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT