ADVERTISEMENT

ಕಾಂಗ್ರೆಸ್‌ಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ರಾಜೇಶ ಹಿರೇಮಠ

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 15:56 IST
Last Updated 25 ಜೂನ್ 2024, 15:56 IST
ಸಿಂಧನೂರಿನ ಗಾಂಧಿ ವೃತ್ತದಲ್ಲಿ ಮಂಗಳವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಸಿಂಧನೂರಿನ ಗಾಂಧಿ ವೃತ್ತದಲ್ಲಿ ಮಂಗಳವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಸಿಂಧನೂರು: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ನಗರ ಮತ್ತು ಗ್ರಾಮೀಣ ಮಂಡಲ ವತಿಯಿಂದ ಮಂಗಳವಾರ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟಿಸಲಾಯಿತು.

ಮುಖಂಡ ರಾಜೇಶ ಹಿರೇಮಠ ಮಾತನಾಡಿ, ‘ಸಂವಿಧಾನದ ಆಶಯಗಳನ್ನೇ ಬುಡಮೇಲು ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಆದ್ದರಿಂದ ಸಂಸದ ರಾಹುಲ್ ಗಾಂಧಿ ದೇಶದ ಜನರ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ಮುಖಂಡರಾದ ಎಂ.ದೊಡ್ಡಬಸವರಾಜ, ಮಧ್ವರಾಜ್ ಆಚಾರ್, ಈರೇಶ ಇಲ್ಲೂರು, ನಗರ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಜೀನೂರು, ಮುಖಂಡರಾದ ಜಡಿಯಪ್ಪ ಹೂಗಾರ ವಕೀಲ, ಶಿವಬಸವನಗೌಡ ಗೊರೇಬಾಳ, ಮಂಜುನಾಥ ಅರಸೂರ್, ಮಲ್ಲಿಕಾರ್ಜುನ ಕಾಟಗಲ್, ಯಲ್ಲೂಸಾ ಬದಿ, ತಿಮ್ಮಾರೆಡ್ಡಿ ಹುಡಾ, ಸಿರಾಜ್‍ಪಾಷಾ, ಮಹಾದೇವ ನಾಯಕ, ಮುತ್ತು ಬರಸಿ, ಕೃಷ್ಣಪ್ಪ ರಾಠೋಡ್, ಶಿವಕುಮಾರ, ರಾಮ್‍ಮೂರ್ತಿ, ಸಿದ್ದು ಹೂಗಾರ್ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.