ADVERTISEMENT

ಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಒತ್ತಾಯ: ತಹಶೀಲ್ದಾರ್ ಮೂಲಕ ಪ್ರಧಾನಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 14:12 IST
Last Updated 16 ಜುಲೈ 2024, 14:12 IST
ದೇವದುರ್ಗ ತಾಲ್ಲೂಕು ಏಮ್ಸ್ ಹೋರಾಟ ಸಮಿತಿ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಸ್ಥಾಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ದೇವದುರ್ಗ ತಾಲ್ಲೂಕು ಏಮ್ಸ್ ಹೋರಾಟ ಸಮಿತಿ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಸ್ಥಾಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.   

ದೇವದುರ್ಗ: ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಸ್ಥಾಪಿಸುವಂತೆ ಒತ್ತಾಯಿಸಿ ದೇವದುರ್ಗ ತಾಲ್ಲೂಕು ಏಮ್ಸ್ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆ ಮುಖಂಡರು ಮಂಗಳವಾರ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕಸಾಪ ತಾಲ್ಲೂಕು ಅಧ್ಯಕ್ಷ ಎಚ್ ಶಿವರಾಜ ಮಾತನಾಡಿ, ಪ್ರಾದೇಶಿಕ ಅಸಮತೋಲನೆಯಿಂದ ನರಳುತ್ತಿರುವ ರಾಯಚೂರು ಜಿಲ್ಲೆಗೆ ಮೊದಲ ಹಂತದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಐಐಟಿ ಅಂತಹ ರಾಷ್ಟ್ರಮಟ್ಟದ ಉನ್ನತ ಶಿಕ್ಷಣ ಕೇಂದ್ರ ಸ್ಥಾಪಿಸುವ ಮೂಲಕ ಪರಿಹರಿಸಬಹುದಾಗಿದೆ ಎಂದು ನಂಜುಂಡಪ್ಪ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಆದರೆ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಧಾರವಾಡಕ್ಕೆ ಐಐಟಿ ನೀಡಿ ಜಿಲ್ಲೆಗೆ ದ್ರೋಹ ಬಗೆದಿವೆ. ಆದ್ದರಿಂದ ಏಮ್ಸ್ ರಾಯಚೂರಿಗೆ ಮಂಜೂರು ಮಾಡಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಕಸಾಪ ಮಾಜಿ ಅಧ್ಯಕ್ಷ ನರ್ಸಿಂಗ್ ರಾವ್ ಸರ್ಕಿಲ್, ಕನ್ನಡ ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ನಾಯಕ, ಡಿ.ಕರಡಿಗುಡ್ಡ ನರ್ಸಿಂಗ್ ರಾವ್ , ಮೈಪಾಲರೆಡ್ಡಿ, ಮಹಾದೇವಪ್ಪ ಚಿಕ್ಕಬೂದುರು, ನಾಗರಾಜ ಖಾನಪುರ, ನಿರಂಜನ್, ಶಿವರಾಜ ರುದ್ರಾಕ್ಷಿ, ವೆಂಕಟರೆಡ್ಡಿ, ಮತ್ತು ಕನ್ನಡ ರಕ್ಷಣಾ ಸೇನೆ ತಾಲ್ಲೂಕು ಘಟಕ ಅಧ್ಯಕ್ಷ ಟಿ ಜಯರಾಜ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.