ADVERTISEMENT

ಆನ್‌ಲೈನ್ ಬೆಟ್ಟಿಂಗ್, ಗೇಮ್ ನಿಷೇಧಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2024, 13:57 IST
Last Updated 15 ಅಕ್ಟೋಬರ್ 2024, 13:57 IST

ರಾಯಚೂರು: ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮ್‌ಗಳಿಂದ ಆಗುತ್ತಿರುವ ಅನಾಹುತಗಳನ್ನು ತಡೆಯಬೇಕು ಹಾಗೂ ಅವುಗಳನ್ನು  ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಕೊಂಡಪ್ಪ ಕೆ. ಒತ್ತಾಯಿಸಿದರು.

ಈಚೆಗೆ ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳಿಂದ ಯುವಕರು ಬಹಳಷ್ಟು ಅನಾಹುತಗಳಿಗೆ ಒಳಗಾಗುತ್ತಿದ್ದಾರೆ. ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ಕೆಲವು ಪೊಲೀಸ್ ಠಾಣೆಗಳಲ್ಲಿ ಅನಧಿಕೃತವಾಗಿ ಬೆಟ್ಟಿಂಗ್ ವ್ಯವಸ್ಥೆ ನಡೆಸುತ್ತಿದ್ದ ಆನ್‌ಲೈನ್ ಬುಕ್ಕಿಗಳ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಜನರಿಗೆ ಇದರ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದು ಒತ್ತಾಯಿಸಿದರು.

ADVERTISEMENT

ಎಂ.ಎಸ್. ವೆಂಕಟೇಶ, ಮಹೇಶ ಪಾಟೀಲ, ರಾಮಕೃಷ್ಣ, ವಿಜಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.