ADVERTISEMENT

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 16:25 IST
Last Updated 14 ಅಕ್ಟೋಬರ್ 2024, 16:25 IST

ರಾಯಚೂರು: ಇಲ್ಲಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ಬಿಎಸ್‌ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿಗಳು ತಮ್ಮ ಬ್ಯಾಂಕ್‌ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷ ಮೀರಿರಬಾರದು. ಆಸಕ್ತರು ನವೆಂಬರ್ 10ರೊಳಗೆ ಸೇವಾಸಿಂಧು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರದ ದೂ: ರಾಯಚೂರು 97310 28420, ದೇವದುರ್ಗ 91482 33616, ಲಿಂಗಸುಗೂರು 98864 47863, ಸಿಂಧನೂರು 82176 21732ಗೆ ಸಂಪರ್ಕಿಸಬಹುದು.

ADVERTISEMENT

ವೃದ್ಧಾಶ್ರಮ ಪ್ರಾರಂಭಿಸಲು ಅರ್ಜಿ ಆಹ್ವಾನ

ರಾಯಚೂರು: ಜಿಲ್ಲಾ ವಲಯದಲ್ಲಿ ವೃದ್ಧಾಶ್ರಮವನ್ನು ಪ್ರಾರಂಭಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ನಮೂನೆಯೊಂದಿಗೆ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಅ.30ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹು‌ದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ:08532-200992 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ.17ರಂದು ಮಹರ್ಷಿ ವಾಲ್ಮೀಕಿ ಜಯಂತಿ

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಅ.17ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಆಶಾಪೂರು ರಸ್ತೆಯ ಮಹರ್ಷಿ ವಾಲ್ಮೀಕಿ ಭವನದಲ್ಲಿ ಮಹರ್ಷಿ ವಾಲ್ಮೀಕಿ  ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.  

ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ, ಬಸನಗೌಡ ದದ್ದಲ್, ಆರ್.ಬಸನಗೌಡ ತುರ್ವಿಹಾಳ, ಹಂಪನಗೌಡ ಬಾದರ್ಲಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಶೈಲ ಸಿ.ಕಾಚಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.