ADVERTISEMENT

ದೇವದುರ್ಗ | ಶಾಲೆಯ ಪರವಾನಗಿ ರದ್ದು ಮಾಡಲು ರೈತ ಸಂಘ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಜೂನ್ 2023, 15:37 IST
Last Updated 27 ಜೂನ್ 2023, 15:37 IST
ದೇವದುರ್ಗ ತಾಲ್ಲೂಕಿನ ಜಾಲಹಳ್ಳಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮೇಲೆ ನಡೆದ ಹಲ್ಲೆ ಯತ್ನವನ್ನು ಖಂಡಿಸಿ ಕರ್ನಾಟಕ ರೈತ ಸಂಘ ಪದಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವರಿಗೆ ಗ್ರೇಡ್ 2 ತಹಶೀಲ್ದಾರರ ಶ್ರೀನಿವಾಸ್ ಚಾಪೆಲ್ ಮೂಲಕ ಮನವಿ ಪತ್ರ ಸಲ್ಲಿಸಿದರು.
ದೇವದುರ್ಗ ತಾಲ್ಲೂಕಿನ ಜಾಲಹಳ್ಳಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮೇಲೆ ನಡೆದ ಹಲ್ಲೆ ಯತ್ನವನ್ನು ಖಂಡಿಸಿ ಕರ್ನಾಟಕ ರೈತ ಸಂಘ ಪದಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವರಿಗೆ ಗ್ರೇಡ್ 2 ತಹಶೀಲ್ದಾರರ ಶ್ರೀನಿವಾಸ್ ಚಾಪೆಲ್ ಮೂಲಕ ಮನವಿ ಪತ್ರ ಸಲ್ಲಿಸಿದರು.   

ದೇವದುರ್ಗ: ‘ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಸುಖದೇವ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಜಾಲಹಳ್ಳಿ ಶಾಲೆ ಮಾಲೀಕರಾದ ಶರಣು ಹುಣಸಿಗಿ ಮತ್ತು ಗಾಣಧಾಳ ಶಾಲೆ ಮಾಲೀಕ ಬಸವರಾಜ ಉದ್ದೇಶಪೂರ್ವಕವಾಗಿ ಹಲ್ಲೆಗೆ ಯತ್ನಿಸಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿದೆ. ಇವರ ವಿರುದ್ಧ ಕ್ರಮ ಜರುಗಿಸಿ, ಶಾಲೆಗಳ ಪರವಾನಗಿ ರದ್ದು ಮಾಡಬೇಕು’ ಎಂದು ಕರ್ನಾಟಕ ರೈತ ಸಂಘ ತಾಲ್ಲೂಕು ಅಧ್ಯಕ್ಷ ಗಿರಲಿಂಗ ಸ್ವಾಮಿ ಒತ್ತಾಯಿಸಿದರು.

ಪಟ್ಟಣದಲ್ಲಿ ಮಂಗಳವಾರ ಜಾಲಹಳ್ಳಿಯಲ್ಲಿ ಬಿಇಒ ಮೇಲೆ ನಡೆದ ಹಲ್ಲೆ ಯತ್ನ ಖಂಡಿಸಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇಂಥ ಘಟನೆಗಳು ಸರ್ಕಾರಿ ಶಾಲೆ ಮತ್ತು ಖಾಸಗಿ ಶಾಲೆಯ ಮಕ್ಕಳ ಮೇಲೆ ಪರಿಣಾಮ ಬೀರುತ್ತವೆ. ಕೃತ್ಯ ಎಸಗಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದರು.

ಎರಡೂ ಶಾಲೆಗಳ ಪರವಾನಗಿಯನ್ನು ರದ್ದು ಮಾಡುವಂತೆ ಗ್ರೇಡ್ 2 ತಹಶೀಲ್ದಾರ ಶ್ರೀನಿವಾಸ ಚಾಪಲ್ ಮೂಲಕ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಮನವಿ ಪತ್ರ ಸಲ್ಲಿಸಲಾಯಿತು. ಕಾರ್ಯದರ್ಶಿ ದುರ್ಗಣ್ಣ, ಶಫೀಕ್ ಮತ್ತು ಜಯಗೌಡ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.