ADVERTISEMENT

ನಿರಾಶದಾಯಕ ಬಜೆಟ್: ಸಂಸದ ರಾಜಾ ಅಮರೇಶ್ವರ ನಾಯಕ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2024, 16:25 IST
Last Updated 16 ಫೆಬ್ರುವರಿ 2024, 16:25 IST
ರಾಜಾ ಅಮರೇಶ್ವರ ನಾಯಕ
ರಾಜಾ ಅಮರೇಶ್ವರ ನಾಯಕ   

ರಾಯಚೂರು: ‘ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಂಡಿಸಿದ ಆದಾಯ ಕೊರತೆಯ ಬಜೆಟ್ ಜಿಲ್ಲೆಗೆ ಯಾವುದೇ ವಿಶೇಷ ಯೋಜನೆಗಳಿಗೆ ಅನುದಾನವಿಲ್ಲದ ನಿರಾಶದಾಯಕ ಬಜೆಟ್ ಆಗಿದೆ’ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಅವರು ₹ 3,71,383 ಕೋಟಿ ಗಾತ್ರದ ಆದಾಯದ ಕೊರತೆಯ ಬಜೆಟ್ ಮಂಡಿಸಿದ್ದು ಹಾಗೂ ಕೇವಲ ಗ್ಯಾರಂಟಿ ಯೋಜನೆಗಳಿಗೆ ಹಣ ತುಂಬಿಸಲು ಹೆಚ್ಚಿನ ಸಾಲಕ್ಕೆ ಬೇಡಿಕೆ ನೀಡಿರುವುದು ರಾಜ್ಯ ಅಭಿವೃದ್ಧಿಗೆ ಧಕ್ಕೆ ಉಂಟು ಮಾಡುವ ಬಜೆಟ್ ಆಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಗೆ ಕೇವಲ ಹಳೆ ಯೋಜನೆಗಳನ್ನು ಮರು ಗುರುತಿಸಲಾಗಿದೆ. ರಾಯಚೂರು ವಿಶ್ವವಿದ್ಯಾಲಯಕ್ಕೆ, ಟೆಕ್ಸ್‌ಟೈಲ್ ಪಾರ್ಕ್‌ಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ. ಕೇಂದ್ರ ಸರ್ಕಾರದ ನೆರವಿನ ಯೋಜನೆಗಳಾದ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆಗಳಿಗೆ ರಾಜ್ಯದ ಪಾಲಿನ ಅನುದಾನ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ಕನಿಷ್ಠ ಪಕ್ಷ ರಾಯಚೂರು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅನುದಾನ ನೀಡಿದ್ದಲ್ಲಿ ಈ ಭಾಗದ ಜನರ ವಿದ್ಯಾರ್ಜನೆಗೆ ಅನುಕೂಲವಾಗುತ್ತಿತ್ತು. ವಿಶ್ವವಿದ್ಯಾಲಯ ಸ್ಥಾಪನೆಗೆ ಅರ್ಥ ಬರುತ್ತಿತ್ತು. ಕೇವಲ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಘೋಷಣೆ ಮಾಡಿದ ಯೋಜನೆಗಳನ್ನು ಪುನಃ ಉಚ್ಚರಿಸಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ನಿರಾಶೆಯನ್ನು ಮೂಡಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.