ADVERTISEMENT

ರಾಯಚೂರು: ಕಾರ್ಮಿಕರಿಗೆ ಸುರಕ್ಷತಾ ಸಾಧನ ವಿತರಣೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 15:18 IST
Last Updated 24 ಅಕ್ಟೋಬರ್ 2024, 15:18 IST
ರಾಯಚೂರಿನ ನಿರ್ಮಿತಿ ಕೇಂದ್ರದ ಕಾರ್ಯಾಲಯದ ಆವರಣದಲ್ಲಿ ನಡೆದ ಕಾರ್ಮಿಕರಿಗೆ ಸುರಕ್ಷತಾ ಸಾಧನ ವಿತರಣೆ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಉದ್ಘಾಟಿಸಿದರು
ರಾಯಚೂರಿನ ನಿರ್ಮಿತಿ ಕೇಂದ್ರದ ಕಾರ್ಯಾಲಯದ ಆವರಣದಲ್ಲಿ ನಡೆದ ಕಾರ್ಮಿಕರಿಗೆ ಸುರಕ್ಷತಾ ಸಾಧನ ವಿತರಣೆ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಉದ್ಘಾಟಿಸಿದರು   

ರಾಯಚೂರು: ‘ಕಟ್ಟಡ ಕಾರ್ಮಿಕರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೀಡಿರುವ ಸುರಕ್ಷತಾ ಸಾಧನಗಳನ್ನು ಅಳವಡಿಸಿಕೊಂಡು ಕಟ್ಟಡ ನಿರ್ಮಾಣದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.

ನಗರದ ನಿರ್ಮಿತಿ ಕೇಂದ್ರದ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ, ನಿರ್ಮಿತಿ ಕೇಂದ್ರ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಹಾಗೂ ಕ್ಯಾಡ್‌ಮ್ಯಾಕ್ಸ್ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆರ್.ಪಿ.ಎಲ್ ತರಬೇತಿ ಮತ್ತು ಸುರಕ್ಷತಾ ಸಾಧನಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

ಕಾರ್ಮಿಕ ಇಲಾಖೆಯಿಂದ ನೀಡಿರುವ ಕಿಟ್‌ಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಕಾರ್ಮಿಕ ಅಧಿಕಾರಿ ಆರತಿ ಮಾತನಾಡಿದರು. ಕ್ಯಾಡ್‌ಮ್ಯಾಕ್ಸ್ ಮಲ್ಲಿಕಾರ್ಜುನ ಎಸ್.ಕೆ., ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ, ನಿರ್ಮಿತಿ ಕೇಂದ್ರದ ವಿಶೇಷ ಅಧಿಕಾರಿ ಗಣಪತಿ ಸಾಕ್ರೆ, ಕಾರ್ಮಿಕ ನಿರೀಕ್ಷಕ ಮಹ್ಮದ ಉಮರ್ ಅಬ್ದುಲ್ ಘನಿ, ಎಕ್ಸಿಕ್ಯೂಟಿವ್ ನಾಗರಾಜ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT