ADVERTISEMENT

ರಾಯಚೂರು: ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಣೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2024, 15:54 IST
Last Updated 7 ಜೂನ್ 2024, 15:54 IST

ರಾಯಚೂರು: ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಚಟುವಟಿಕೆಗಳು ಚುರುಕುಗೊಂಡಿವೆ. ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ನೀಡಲಾದ ಬೀಜಗಳನ್ನು ದಾಸ್ತಾನು ಮಾಡಿ ವಿತರಿಸುವ ಕಾರ್ಯ ನಡೆದಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 1,53,096 ಹೆಕ್ಟೇರ್ ಹತ್ತಿ ಬೆಳೆಯಲಾಗುತ್ತಿದೆ. ಬಿ.ಟಿ ಹತ್ತಿ ಬೀಜಗಳ ಮಾರುಕಟ್ಟೆಗೆ ಸಂಬಂಧಿಸಿದಂತೆ ಗುಣ ನಿಯಂತ್ರಣ ಕಾರ್ಯಕ್ರಮದಡಿ ಮಾರಾಟ ಮಳಿಗೆಗಳ ಪರಿಶೀಲನೆ, ವಿಶ್ಲೇಷಣೆಗಾಗಿ ಮಾದರಿ ಸಂಗ್ರಹಣೆ ಹಾಗೂ ನಿಗದಿüತ ದರಗಳಲ್ಲಿ ಕೃಷಿ ಪರಿಕರಗಳನ್ನು ರೈತರಿಗೆ ತಲುಪಿಸುವಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಿಲ್ಲೆಯಿಂದ 34 ಹತ್ತಿ ಬೀಜಗಳ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಕಳುಹಿಸಿಕೊಡಲಾಗಿದೆ. ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳ ಬಗ್ಗೆ ಎಲ್ಲ ರೈತ ಸಂಪರ್ಕ ಕೇಂದ್ರಗಳಿಂದ ಜಾಗೃತಿ ಕಾರ್ಯಕ್ರಮ ಹಾಗೂ ಗಡಿ ಭಾಗಗಳಲ್ಲಿರುವ ನಮ್ಮ ವ್ಯಾಪ್ತಿಯ ಹಳ್ಳಿಗಳಲ್ಲಿ ಲೂಸ್ ಹತ್ತಿ ಬೀಜಗಳ ಸಾಗಾಣಿಕೆ ಹಾಗೂ ಅಂತಹ ಬೀಜಗಳನ್ನು ರೈತರು ಉಪಯೋಗಿಸದೇ, ಅಧಿಕೃತ ಮಾರಾಟಗಾರರಿಂದ ಬೀಜಗಳನ್ನು ಖರೀದಿಸಿಬೇಕು ಎಂದು ರೈತರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.