ADVERTISEMENT

ಮಸ್ಕಿ | ನಿರ್ಲಕ್ಷದಿಂದ ಬೈಕ್ ಚಾಲನೆ: ಸವಾರನಿಗೆ 2 ವರ್ಷ ಜೈಲು, ದಂಡ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2024, 13:38 IST
Last Updated 7 ಅಕ್ಟೋಬರ್ 2024, 13:38 IST
<div class="paragraphs"><p>ಜೈಲು </p></div>

ಜೈಲು

   

(ಪ್ರಾಧಿನಿಧಿಕ ಚಿತ್ರ)

ಮಸ್ಕಿ: ನಿರ್ಲಕ್ಷ್ಯದಿಂದ ಬೈಕ್ ಚಾಲನೆ ಮಾಡಿ ಮೂವರ ಸಾವಿಗೆ ಕಾರಣರಾಗಿದ್ದ ಮಹೇಶ ಬಸವರಾಜಪ್ಪ ಗುಡದೂರು ಎಂಬುವರಿಗೆ 2 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹11,500 ದಂಡ ವಿಧಿಸಿ ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಧೀಶ ಅಚ್ಚಪ್ಪ ದೊಡ್ಡ ಬಸವರಾಜ ಅವರು ಶುಕ್ರವಾರ ಆದೇಶಿಸಿದ್ದಾರೆ.

ADVERTISEMENT

2017ರಲ್ಲಿ ಮಸ್ಕಿ-ಗುಡದೂರು ರಸ್ತೆಯ ತುಂಗಭದ್ರಾ ಎಡದಂಡೆ ಕಾಲುವೆ ಸಮೀಪ ಬೈಕ್ ಸವಾರ ಮಹೇಶ ಗುಡದೂರು ಎಂಬುವರು ನಿರ್ಲಕ್ಷ್ಯದಿಂದ ಬೈಕ್ ಚಾಲನೆ ಮಾಡಿ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಮೃತಪಟ್ಟಿದ್ದರಿಂದ ಮಸ್ಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಸರ್ಕಲ್ ಇನ್‌ಸ್ಪೆಕ್ಟರ್ ಆಗಿದ್ದ ಎಂ.ಜಿ. ಸತ್ಯನಾರಾಯಣ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಆರೋಪಿಗೆ 2 ವರ್ಷ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮಾರುತಿ ಕೆ. ಕಲ್ಲೂರು ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.