ADVERTISEMENT

ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲು ಪ್ರಯತ್ನ: ಶಾಸಕ ಬಸನಗೌಡ ತುರ್ವಿಹಾಳ

​ಪ್ರಜಾವಾಣಿ ವಾರ್ತೆ
Published 21 ಜುಲೈ 2024, 14:23 IST
Last Updated 21 ಜುಲೈ 2024, 14:23 IST
ಮಸ್ಕಿ ತಾಲ್ಲೂಕಿನ ಸುಂಕನೂರು ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಆರ್.ಬಸನಗೌಡ ತುರುವಿಹಾಳ ಚಾಲನೆ ನೀಡಿದರು
ಮಸ್ಕಿ ತಾಲ್ಲೂಕಿನ ಸುಂಕನೂರು ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ಆರ್.ಬಸನಗೌಡ ತುರುವಿಹಾಳ ಚಾಲನೆ ನೀಡಿದರು   

ಮಸ್ಕಿ: ‘ತಾಲ್ಲೂಕಿನ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವ ಮೂಲಕ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ತಾಲ್ಲೂಕಿನ ಸುಂಕನೂರು ಗ್ರಾಮದಲ್ಲಿ ಭಾನುವಾರ ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಿ, ನಂತರ ನಡೆದ ಸಭೆಯಲ್ಲಿ ಮಾತನಾಡಿದ ಅವರು,‘ತಾಲ್ಲೂಕಿನಾದ್ಯಂತ ಅವಶ್ಯ ಇರುವ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕೆಕೆಆರ್‌ಡಿಬಿ ಯೋಜನೆಯಿಂದ ಅನುದಾನ ನೀಡುವ ಮೂಲಕ ಕೊಠಡಿಗಳ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.

ಕುಡಿಯುವ ನೀರು, ಶೌಚಾಲಯಗಳ ನಿರ್ಮಾಣಕ್ಕೂ ಒತ್ತು ಕೊಡಲಾಗುತ್ತಿದೆ. ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಸಮಸ್ಯೆಗಳಿದ್ದರೆ ನೇರವಾಗಿ ಬಂದು ಭೇಟಿಯಾಗಿ ಎಂದರು.

ADVERTISEMENT

ಮುಖಂಡ ಮಲ್ಲನಗೌಡ ಸುಂಕನೂರ, ನಿರೂಪಾದೆಪ್ಪ ವಕೀಲ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಮೈಬುಸಾಬ್ ಮುದ್ದಾಪುರ, ಸಂಜಯ ಶೇಠ್ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಶಿಕ್ಷಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.