ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2024, 16:26 IST
Last Updated 14 ಜೂನ್ 2024, 16:26 IST

ರಾಯಚೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಇಲ್ಲಿಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಪೋಕ್ಸೊ ನ್ಯಾಯಾಲಯವು ಶುಕ್ರವಾರ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

ಲಿಂಗಸುಗೂರು ತಾಲ್ಲೂಕಿನ ನೀರಲಕೇರಿ ಗ್ರಾಮದ ಹುಲ್ಲಪ್ಪ ರಾಮಣ್ಣಗೆ (25) ಕಠಿಣ ಶಿಕ್ಷೆ ಹಾಗೂ ₹15 ಸಾವಿರ ದಂಡವನ್ನು ನ್ಯಾಯಾಧೀಶ ಬಿ.ಬಿ. ಜಕಾತಿ ವಿಧಿಸಿದ್ದಾರೆ. ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ₹9 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಿದ್ದಾರೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ 2021ರ ಜನವರಿಯಲ್ಲಿ ಲಿಂಗಸುಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಾಲಾಗಿತ್ತು. ಸಿಪಿಐ ಮಹಾಂತೇಶ ಸಜ್ಜನ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯವು 20 ಸಾಕ್ಷಿಗಳ ಪೈಕಿ 17 ಸಾಕ್ಷಿದಾರರ ವಿಚಾರಣೆ ನಡೆಸಿತ್ತು.

ADVERTISEMENT

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ. ಮಂಜುನಾಥ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.