ADVERTISEMENT

ಹಸಿ ತರಕಾರಿ ಸೇವಿಸಲು ಸಲಹೆ: ಶಿವಲೀಲಾ ಹಿರೇಮಠ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2021, 11:00 IST
Last Updated 4 ಡಿಸೆಂಬರ್ 2021, 11:00 IST

ಹಟ್ಟಿ ಚಿನ್ನದಗಣಿ: ‘ಮನೆಯಲ್ಲಿ ತಯಾರಿಸಿದ ಆಹಾರ ಸೇವನೆಯಿಂದ ಪೌಷ್ಟಿಕತೆ ಹೆಚ್ಚಿಸಬಹುದು’ ಎಂದು ಗುರಗುಂಟಾ ಎ ವಲಯದ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಶಿವಲೀಲಾ ಹಿರೇಮಠ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಲಿಂಗಸುಗೂರು ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಗುರುಗುಂಟಾ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆದ ಪೋಷಣ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಗರ್ಭಿಣಿಯರು, ಬಾಣಂತಿಯರು, ಹಸಿ ತರಕಾರಿ, ಸೊಪ್ಪು ಸೇವಿಸಬೇಕು. ಕಬ್ಬಿಣಾಂಶದ ಮಾತ್ರೆ ತೆಗೆದುಕೊಳ್ಳಬೇಕು. ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ADVERTISEMENT

ನಿಲೋಗಲ್, ಗೆಜ್ಜಲಗಟ್ಟಾ, ಹೆಸರೂರು, ಸೇರಿದಂತೆ ವಿವಿಧ ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮ ಜರುಗಿತು ಎಂದು ಅಧಿಕಾರಿಗಳು ತಿಳಿಸಿದರು.

ಗುರುಗುಂಟಾ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಮಾತನಾಡಿದರು.

ಮುಖಂಡರಾದ ಗುರುಬಸಪ್ಪ, ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಸೇರಿ ಗ್ರಾಮದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.