ADVERTISEMENT

ಹೂಗಾರ ಮಾದಯ್ಯ ಜಯಂತ್ಯುತ್ಸವ ನಾಳೆ

ಪ್ರತಿಭಾ ಪುರಸ್ಕಾರ, ಜಿಲ್ಲಾ ಹೂಗಾರ ಸಮಾವೇಶ’

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2023, 22:30 IST
Last Updated 3 ನವೆಂಬರ್ 2023, 22:30 IST

ಸಿಂಧನೂರು: ರಾಯಚೂರು ಜಿಲ್ಲಾ ಹೂಗಾರ ಸಮಾಜ ಸಂಘದಿಂದ ಶಿವಶರಣ ಹೂಗಾರ ಮಾದಯ್ಯ ಜಯಂತ್ಯುತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲಾ ಹೂಗಾರ ಸಮಾವೇಶವನ್ನು ನ.5 ರಂದು ಬೆಳಿಗ್ಗೆ 11.30 ಗಂಟೆಗೆ ರಾಯಚೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೂಗಾರ ಸಮಾಜದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಲಿಂಗರಾಜ ಹೂಗಾರ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 9 ಗಂಟೆಗೆ ರಾಯಚೂರು ನಗರದ ಸೋಮವಾರಪೇಟೆ ಮಠದಿಂದ ವೀರಶೈವ ಕಲ್ಯಾಣ ಮಂಟಪದವರೆಗೆ ಶರಣ ಹೂಗಾರ ಮಾದಯ್ಯನವರ ಭಾವಚಿತ್ರ ಮೆರವಣಿಗೆ ನಡೆಯಲಿದೆ. 11.30ಕ್ಕೆ ಜಯತ್ಯುತ್ಸವ ನಡೆಯಲಿದೆ. ಜಿಲ್ಲಾ ಹೂಗಾರ ಸಮಾವೇಶದ ಸಾನ್ನಿಧ್ಯವನ್ನು ಶಾಂತಮಲ್ಲ ಶಿವಾಚಾರ್ಯರು, ಅಭಿನವ ರಾಚೋಟಿವೀರ ಶಿವಾಚಾರ್ಯರು, ವೀರಸಂಗಮೇಶ್ವರ ಶಿವಾಚಾರ್ಯರು, ಬಸವರಾಜಪ್ಪ ತಾತ ಕಲ್ಲಂಗೇರಾ ವಹಿಸುವರು.

ಸಣ್ಣನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್.ಬೋಸರಾಜು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸಮಾವೇಶ ಉದ್ಘಾಟಿಸುವರು. ಸಂಸದರಾದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ ಹೂಗಾರ ಮಾದಯ್ಯನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಹೂಗಾರ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಈರಣ್ಣ ಹೂಗಾರ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಶಾಸಕರು ಅತಿಥಿಗಳಾಗಿ ಭಾಗವಹಿಸುವರು ಎಂದು ವಿವರಿಸಿದರು.

ADVERTISEMENT

ಹೂಗಾರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಭೀಮಣ್ಣ ಹೂಗಾರ ಮಾತನಾಡಿ, ‘ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ತಲಾ ₹1000 ನಗದು ಬಹುಮಾನ ಹಾಗೂ ಶೇ 95ಕ್ಕಿಂತ ಹೆಚ್ಚು ಫಲಿತಾಂಶ ಪಡೆದ 10 ವಿದ್ಯಾರ್ಥಿಗಳಿಗೆ ತಲಾ ₹10 ಸಾವಿರದಂತೆ ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು. ಈ ಕಾರ್ಯಕ್ರಮಕ್ಕೆ ಸಿಂಧನೂರು ತಾಲ್ಲೂಕಿನಿಂದ 20 ಕ್ರೂಷರ್‌ಗಳ ಮೂಲಕ ಸಮಾಜದ ಬಾಂಧವರು ತೆರಳಲಿದ್ದಾರೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಗೌರವ ಸಲಹೆಗಾರ ಶರಣಪ್ಪ ಹೂಗಾರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಅಮರೇಶ ಹೂಗಾರ, ಕಾನೂನು ಸಲಹೆಗಾರ ಜಡಿಯಪ್ಪ ಹೂಗಾರ, ಮುಖಂಡರಾದ ಚನ್ನಬಸವ ಹೂಗಾರ, ಶರಣಪ್ಪ ಹಂಚಿನಾಳ, ವೀರೂ ಹೂಗಾರ, ರವಿ ಹೂಗಾರ, ರಮೇಶ ಹೂಗಾರ, ವೀರೇಶ ಗುಂಜಳ್ಳಿ, ರಮೇಶ ಕುನ್ನಟಗಿ, ಮಲ್ಲಪ್ಪ ಹೂಗಾರ ಇದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.