ADVERTISEMENT

ಹಾಸ್ಟೆಲ್ ಸಿಬ್ಬಂದಿ ವೇತನ ಪಾವತಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2022, 13:05 IST
Last Updated 16 ಮಾರ್ಚ್ 2022, 13:05 IST
ಮಾನ್ವಿಯಲ್ಲಿ ಬುಧವಾರ ಜಯ ಕರ್ನಾಟಕ ರಕ್ಷಣಾ ಸೇನೆಯ ಪದಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು
ಮಾನ್ವಿಯಲ್ಲಿ ಬುಧವಾರ ಜಯ ಕರ್ನಾಟಕ ರಕ್ಷಣಾ ಸೇನೆಯ ಪದಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು   

ಮಾನ್ವಿ: ತಾಲ್ಲೂಕಿನ ವಿದ್ಯಾರ್ಥಿ ವಸತಿ ನಿಲಯಗಳ ದಿನಗೂಲಿ ಸಿಬ್ಬಂದಿಗಳ ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆಯ ಪದಾಧಿಕಾರಿಗಳು ಬುಧವಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂವ್ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಸೇವೆ ಸಲ್ಲಿಸುತ್ತಿದ್ದರುವ ದಿನಗೂಲಿ ಸಿಬ್ಬಂದಿ ಹಾಗೂ ಕಾರ್ಮಿಕರಿಗೆ 4–5 ತಿಂಗಳಿಂದ ವೇತನ ನೀಡಿಲ್ಲ. ಕಾರಣ ಬಡ ಕಾರ್ಮಿಕರು ಹಾಗೂ ಸಿಬ್ಬಂದಿಯ ಕುಟುಂಬ ನಿರ್ವಹಣೆಗೆ ತೊಂದರೆ ಅನುಭವಿಸುವಂತಾಗಿದೆ. ಈ ಕುರಿತು ಇಲಾಖೆಯ ಮೇಲಧಿಕಾರಿಗಳು ಗಮನಹರಿಸಬೇಕು. ಸಿಬ್ಬಂದಿಯ ಬಾಕಿ ವೇತನ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಜಯ ಕರ್ನಾಟಕ ರಕ್ಷಣಾ ಸೇನೆಯ ತಾಲ್ಲೂಕು ಅಧ್ಯಕ್ಷ ರಾಜಾ ವಿಜಯಕುಮಾರ ನಾಯಕ, ಇತರ ಪದಾಧಿಕಾರಿಗಳಾದ ಜಲಾಲ್ ಶಾಸ್ತ್ರೀ ಕ್ಯಾಂಪ್, ರವಿ ಗವಿಗಟ್, ವಿಜಯಮಹಾಂತೇಶ ಸುಂಕೇಶ್ವರ, ದುರುಗಪ್ಪ ಸಾದಾಪುರ, ಮಹಾದೇವ, ವಸಂತ, ನಿಖಿಲ್, ರಾಮ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.