ರಾಯಚೂರು: ತಾಲ್ಲೂಕಿನ ಹಂಚಿನಾಳ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಟ್ರಾನ್ಸ್ ಫಾರ್ಮ್ (ವಿದ್ಯುತ್ ಪರಿವರ್ತಕ)ಗೆ ಬುಧವಾರ ಬೆಳಗಿನ ಜಾವ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಪರಿವರ್ತಕ ಹಾಳಾಗಿದೆ. ಚಾಲಕ ಗಾಯಗೊಂಡಿದ್ದಾನೆ.
ಮಂತ್ರಾಲಯ ರಸ್ತೆಯಿಂದ ರಾಯಚೂರಿಗೆ ಬರುತ್ತಿದ್ದ 20 ಟೈರ್ನ ಬೃಹತ್ ಗಾತ್ರದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ಮರಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಸಂಪೂರ್ಣ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಪರಿವರ್ತಕಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆಯುವ ವೇಳೆ ವಿದ್ಯುತ್ ಕಡಿತವಾಗಿದ್ದರಿಂದ ಯಾವುದೇ ಅನಾಹುತವೇ ಸಂಭವಿಸಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಯಾವುದೇ ಪ್ರಕರಣ ದಾಖಲಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.