ADVERTISEMENT

ಟಿಪ್ಪು ಜಯಂತಿ ಬದಲಾಗಿ ಕಲಾಂ ಜಯಂತಿ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 6:07 IST
Last Updated 1 ನವೆಂಬರ್ 2019, 6:07 IST
ಶ್ರೀರಾಮುಲು
ಶ್ರೀರಾಮುಲು   

ರಾಯಚೂರು: ಟಿಪ್ಪು ಸುಲ್ತಾನ ಜಯಂತಿ ಬದಲು ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಅವರ ಜಯಂತಿ ಆಚರಿಸುವುದಕ್ಕೆ ಪ್ರಸ್ತಾವನೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.

‘ಟಿಪ್ಪು ಜಯಂತಿ ಆಚರಣೆ ಮಾತ್ರ ಕೈಬಿಡಲಾಗುವುದು. ಪಠ್ಯದಲ್ಲಿ ಟಿಪ್ಪು ಪಾಠ ಕೈಬಿಡುವ ವಿಚಾರದ ಬಗ್ಗೆ ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿ ವರದಿ ಆಧರಿಸಿ ನಿರ್ಧಾರ ಕೈಗೊಳ್ಳುವುದು ಸಿಎಂ ವಿವೇಚನೆಗೆ ಬಿಡಲಾಗಿದೆ’ ಎಂದು ದ್ವಂದ್ವ ಇರುವುದನ್ನು ಬಹಿರಂಗಗೊಳಿಸಿದರು.

ಸಿದ್ದರಾಮಯ್ಯ ಚರ್ಚೆಗೆ ಬರಲಿ: ‘ರಾಜ್ಯದಲ್ಲಿ ಸರ್ಕಾರ ಸತ್ತಿದೆ ಎಂದು ಟೀಕೆ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಹತಾಶೆಯಿಂದ ಕೂಡಿದೆ. ಸರ್ಕಾರದ 100 ದಿನಗಳ ಸಾಧನೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದಕ್ಕೆ ಬರಲಿ’ ಎಂದು ಸವಾಲು ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.