ADVERTISEMENT

ರಾಯಚೂರಲ್ಲಿ ಸಾಮೂಹಿಕ ಯೋಗ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 2:04 IST
Last Updated 21 ಜೂನ್ 2024, 2:04 IST
   

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಕ್ರೀಡಾ ಇಲಾಖೆಗಳ ಆಶ್ರಯದಲ್ಲಿ ಯೋಗ ದಿನಾಚರಣೆಯ ಅಂಗವಾಗಿ ಇಲ್ಲಿಯ ಮಹ್ಮಾತ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಾಮೂಹಿಕ ಯೋಗ ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಪಾಂಡ್ವೆ, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗ ಅಭ್ಯಾಸ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT