ADVERTISEMENT

ಜಲಧಾರೆ ಯೋಜನೆ ಮೂಲಕ ಸಮಗ್ರ ರಾಯಚೂರು ಜಿಲ್ಲೆಗೆ ಕುಡಿಯುವ ನೀರು- ಸಿಎಂ

​ಪ್ರಜಾವಾಣಿ ವಾರ್ತೆ
Published 26 ಜೂನ್ 2019, 3:58 IST
Last Updated 26 ಜೂನ್ 2019, 3:58 IST
ರಾಯಚೂರಿನಲ್ಲಿ ಬುಧವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಅಧಿಕಾರಿಗಳು, ಜನಪ್ರತಿಗಳೊಂದಿಗೆ ಚರ್ಚೆ ನಡೆಸಿದರು.
ರಾಯಚೂರಿನಲ್ಲಿ ಬುಧವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಅಧಿಕಾರಿಗಳು, ಜನಪ್ರತಿಗಳೊಂದಿಗೆ ಚರ್ಚೆ ನಡೆಸಿದರು.   

ರಾಯಚೂರು: ಜಲಧಾರೆ ಯೋಜನೆಯ ಮೂಲಕ ಸಮಗ್ರ ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಪ್ರಸ್ತಾವನೆ ಸರಕಾರದ ಮುಂದಿದ್ದು, ಅದನ್ನು ಶೀಘ್ರ ಅನುಮೋದನೆ ನೀಡುವುದರ ಮೂಲಕ ಇಡೀ ಜಿಲ್ಲೆಗೆ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಮಾನ್ವಿ ತಾಲ್ಲೂಕಿನ ಕರೇಗುಡ್ಡಕ್ಕೆ ಗ್ರಾಮ ವಾಸ್ತವ್ಯಕ್ಕೆಹೊರಡುವ ಪೂರ್ವ ಅತಿಥಿಗೃಹದಲ್ಲಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಬುಧವಾರ ಬೆಳಿಗ್ಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಿಯೂ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಶರತ್ ಬಿ. ಹಾಗೂ ಜಿಪಂ ಸಿಇಒ ನಳಿನ್ ಅತುಲ್ ಅವರಿಗೆ ಸೂಚನೆ ನೀಡಿದರು.
ಬರಗಾಲದ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ADVERTISEMENT

ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ, ಪಶುಸಂಗೋಪನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಎಚ್ ಕೆಆರ್ ಡಿ ಬಿ, ಬಿಸಿಎಂ ಇಲಾಖೆಗಳಿಗೆ ಸಂಬಂಧಿಸಿದ ₹81.45 ಕೋಟಿ ಮೊತ್ತದ 38 ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಆಯೋಜಿಸಲಾಗಿದೆ ಎಂದು ಡಿಸಿ ತಿಳಿಸಿದರು.

ಸಚಿವರಾದ ಸಾ.ರಾ.ಮಹೇಶ, ಶಿವಶಂಕರ ರೆಡ್ಡಿ, ವೆಂಕಟರಾವ ನಾಡಗೌಡ, ಶಾಸಕ ರಾಜಾವೆಂಕಟಪ್ಪ ನಾಯಕ್ , ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಎಚ್.ಬಿ.ದಿನೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.