ADVERTISEMENT

ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳ ವರದಾನ: ಶಿವಯ್ಯ ಮುಪ್ಪಯ್ಯನಮಠ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 14:21 IST
Last Updated 3 ಆಗಸ್ಟ್ 2024, 14:21 IST
<div class="paragraphs"><p>ಸಿಂಧನೂರಿನ ಸರ್ಕಾರಿ ಮಹಾವಿದ್ಯಾಲಯದಲ್ಲಿ ಶನಿವಾರ ಉದ್ಯೋಗ ಮೇಳವನ್ನು ಸರ್ಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲ ಶಿವಯ್ಯ ಮುಪ್ಪಯ್ಯನಮಠ ಉದ್ಘಾಟಿಸಿದರು</p></div>

ಸಿಂಧನೂರಿನ ಸರ್ಕಾರಿ ಮಹಾವಿದ್ಯಾಲಯದಲ್ಲಿ ಶನಿವಾರ ಉದ್ಯೋಗ ಮೇಳವನ್ನು ಸರ್ಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲ ಶಿವಯ್ಯ ಮುಪ್ಪಯ್ಯನಮಠ ಉದ್ಘಾಟಿಸಿದರು

   

ಸಿಂಧನೂರು: ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳಗಳು ವರದಾನವಾಗಿವೆ ಎಂದು ಸರ್ಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲ ಶಿವಯ್ಯ ಮುಪ್ಪಯ್ಯನಮಠ ಹೇಳಿದರು.

ಸರ್ಕಾರಿ ಮಹಾವಿದ್ಯಾಲಯದಲ್ಲಿ ಶನಿವಾರ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗಿ ಪದವೀಧರರ ಸಂಖ್ಯೆ ಹೆಚ್ಚುತ್ತಿದೆ. ಅವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಬಂಡವಾಳದ ಕೊರತೆ ಕಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಗಗನ ಕುಸುಮವಾಗಿವೆ. ಆದ್ದರಿಂದ ಇಂತಹ ಉದ್ಯೋಗ ಮೇಳಗಳು ಪದವೀಧರರಿಗೆ ಸಹಾಯಕವಾಗುತ್ತವೆ ಎಂದರು.

ADVERTISEMENT

ಪ್ರತಿ ಸರ್ಕಾರಿ ಕಾಲೇಜುಗಳಲ್ಲಿ ಇಂತಹ ಮೇಳಗಳನ್ನು ಆಯೋಜಿಸುವುದರಿಂದ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪದವಿಯ ಕೊನೆ ಹಂತದಲ್ಲಿರುವಾಗಲೇ ಉದ್ಯೋಗ ದೊರೆಯುತ್ತದೆ. ದೊಡ್ಡ ಕಂಪನಿಗಳಲ್ಲಿ ಉದ್ಯೋಗ ದೊರೆತರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಾಜೇಂದ್ರ ಕುಮಾರ್ ನಹಾರ್ ಹೇಳಿದರು.

438 ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರು.

ಎಂಜಿನಿಯರ್ಸ್ ಕಂಪನಿಯ ಶ್ರೀನಿವಾಸ್, ಮ್ಯಾನ್ ಪವರ್ ಸಲ್ಯೂಷನ್‍ನ ಶಿವಕುಮಾರ್ ಮತ್ತು ವಿವಿಧ ಕಂಪನಿಗಳ ಎಚ್.ಆರ್.ಅಧಿಕಾರಿಗಳು ಭಾಗವಹಿಸಿದ್ದರು.

ಸಂಚಾಲಕ ಬಸವರಾಜ ತಡಕಲ್, ಡಾ.ಸಂಗನಗೌಡ, ಕಾಲೇಜ್ ಅಭಿವೃದ್ಧಿ ಸಮಿತಿ ಸದಸ್ಯರಾದ ಬಸವರಾಜ್, ಅಮರೇಶ ಮಾಡಸಿರವಾರ ಇದ್ದರು. ಉಪನ್ಯಾಸಕ ವೈಜನಾಥ್ ಸಗರಮಠ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.