ADVERTISEMENT

ಕರ್ನಾಟಕದ ಭಕ್ತರು ಸುರಕ್ಷಿತವಾಗಿದ್ದಾರೆ: ಶ್ರೀಶೈಲ ಶ್ರೀ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 13:04 IST
Last Updated 31 ಮಾರ್ಚ್ 2022, 13:04 IST
ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯರು
ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯರು   

ರಾಯಚೂರು: ‘ಶ್ರೀಶೈಲದಲ್ಲಿ ಕರ್ನಾಟಕದ ಎಲ್ಲ ಭಕ್ತರು ಸುರಕ್ಷಿತವಾಗಿದ್ದಾರೆ. ಯಾರಿಗೂ ಜೀವಭಯವಾಗಲಿ, ತೊಂದರೆಯಾಗಲಿ ಇಲ್ಲ. ಪರಿಸ್ಥಿತಿ ಹತೋಟಿಯಲ್ಲಿದ್ದು, ಎಲ್ಲವೂ ಸುಲಲಿತವಾಗಿ ನಡೆಯುತ್ತಿವೆ‘ ಎಂದು ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯರು ತಿಳಿಸಿದ್ದಾರೆ.

ಗುರುವಾರ ವಿಡಿಯೋ ಸಂದೇಶ ನೀಡಿರುವ ಅವರು, ‘ಬುಧವಾರ ರಾತ್ರಿ ಅಂಗಡಿಯೊಂದರಲ್ಲಿ ಇಬ್ಬರ ಮಧ್ಯೆ ಜಗಳ ನಡೆದಿದೆ. ಕರ್ನಾಟಕದ ಭಕ್ತನ ಮೇಲೆ ಹಲ್ಲೆಯಾಗಿದೆ. ಆದರೆ, ಕರ್ನಾಟಕದ ಭಕ್ತ ಮೃತಪಟ್ಟಿದ್ದಾನೆ ಎಂದು ಸುದ್ದಿ ಹರಡಿದ್ದರಿಂದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪರಿಸ್ಥಿತಿ ಕೈಮೀರುವ ಹಂತದಲ್ಲಿ ಮಧ್ಯಪ್ರವೇಶಿಸಿ ಎಲ್ಲರಿಗೂ ಶಾಂತಿಯಿಂದ ಇರಲು ಹೇಳಲಾಗಿದೆ‘ ಎಂದು ತಿಳಿಸಿದ್ದಾರೆ.

’ಶ್ರೀಶೈಲದಲ್ಲಿ ಕರ್ನಾಟಕದ ಭಕ್ತರು ಕಷ್ಟಕ್ಕೆ ಸಿಲುಕಿದ್ದಾರೆ ಎನ್ನುವುದು ವಸ್ತುಸ್ಥಿತಿಯಲ್ಲ. ಹಲ್ಲೆಗೊಳಗಾದ ವ್ಯಕ್ತಿಗೆ ತಲೆಪಟ್ಟಾಗಿದ್ದರಿಂದ ಮೊದಲು ಸುನ್ನಿಪೇಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕರ್ನೂಲ್‌ ಆಸ್ಪತ್ರೆಗೆ ಗುರುವಾರ ಕಳುಹಿಸಲಾಗಿದೆ‘ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.