ರಾಯಚೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಣ್ಮೀ ಬಾಯಿ ಅವರು ರಾಯಚೂರಿಗೆ ಬುಧವಾರ ಬಂದಿದ್ದಾರೆ.
ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದಾಖಲಾಗುವ ಪ್ರಕರಣಗಳ ಕುರಿತು ವಿಚಾರಿಸಿದರು.
ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು, ಸಭೆ ಇನ್ನು ಮೇಲೆ ಆರಂಭವಾಗಲಿದೆ.
'ಆರ್ ಟಿಪಿಎಸ್ ಇದ್ದರೂ ಕರೆಂಟ್ ಇಲ್ಲ'
‘ರಾಯಚೂರಿನಲ್ಲಿಯೇ ಆರ್ ಟಿಪಿಎಸ್ ಇದ್ದರೂ ಕರೆಂಟ್ ಇಲ್ಲ' ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಬೇಸರ ವ್ಯಕ್ತಪಡಿಸಿದ ಪ್ರಸಂಗವು ನಗರದ ಮಹಿಳಾ ಠಾಣೆಯಲ್ಲಿ ಬುಧವಾರ ನಡೆಯಿತು.
ಮಹಿಳಾ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಆರಂಭವಾಗಿತ್ತು.
ಮಹಿಳಾ ಠಾಣೆಯಲ್ಲಿ 15 ಮಹಿಳಾ ಪೊಲೀಸರು ಇರುವುದು ಸಂತೋಷದ ವಿಚಾರ. ರಾಯಚೂರು ಜಿಲ್ಲೆಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಕಡಿಮೆ ಪ್ರಮಾಣದಲ್ಲಿವೆ ಎಂದು ತಿಳಿಸಿದರು.
ಮಹಿಳಾ ದೌರ್ಜನ್ಯದ ಕೆಲವುಪ್ರಕರಣಗಳು ಪೊಲೀಸ್ ಠಾಣೆಗೆ ವರೆಗೆ ತಲುಪುತ್ತಿಲ್ಲ. ಈ ಕುರಿತು ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.