ಮಂತ್ರಾಲಯ (ರಾಯಚೂರು): ಶ್ರೀರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಎರಡನೇ ದಿನವಾದ ಶುಕ್ರವಾರ ಮಧ್ಯಾರಾಧನೆ ವಿಜೃಂಭಣೆಯಿಂದ ನಡೆಯಿತು.
ಬೆಳಿಗ್ಗೆ ಶ್ರೀಮಠದಲ್ಲಿ ಸುಪ್ರಭಾತ , ಪಂಡಿತರಿಂದ ಪಾರಾಯಾಣ ಮಾಡಲಾಯಿತು. ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಶ್ರೀರಾಯರ ಮೂಲಬೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ ನೆರವೇರಿಸಿದರು. ತಿರುಪತಿ ತಿರುಮಲದ ದೇವರ ಶೇಷ ವಸ್ತ್ರ ರಾಯರಿಗೆ ಸಮರ್ಪಣೆ ಮಾಡಲಾಯಿತು. ಬಳಿಕ, ಶ್ರೀಗಳು ಮೂಲರಾಮದೇವರ ಸಂಸ್ಥಾನ ಪೂಜೆ ಕೈಗೊಂಡರು.
ಮಠದ ಆವರಣದಲ್ಲಿ ಚಿನ್ನದ ರಥದಲ್ಲಿ ರಾಘವೇಂದ್ರ ತೀರ್ಥರ ಬಂಗಾರದ ಉತ್ಸಮೂರ್ತಿ ಇಟ್ಟು ಭವ್ಯ ಮೆರವಣಿಗೆ ಮಾಡಲಾಯಿತು. ಮಂಗಲವಾದ್ಯ, ಮಂತ್ರಘೋಷದೊಂದಿಗೆ ನಡೆದ ಮೆರವಣಿಗೆಯಲ್ಲಿ ಭಕ್ತರು ಸಾಂಪ್ರದಾಯಿಕ ವಸ್ತ್ರ ಧರಿಸಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.