ADVERTISEMENT

ಮಾನ್ವಿ: ಭತ್ತದ ಬೆಳೆ ಹಾನಿ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2024, 13:38 IST
Last Updated 16 ನವೆಂಬರ್ 2024, 13:38 IST
ಮಾನ್ವಿ ತಾಲ್ಲೂಕಿನ ಗವಿಗಟ್ಟು ಗ್ರಾಮದ ಸಮೀಪ ಅಕಾಲಿಕ ಮಳೆಯಿಂದ ನೆಲಕ್ಕುರುಳಿದ ಭತ್ತದ ಬೆಳೆ
ಮಾನ್ವಿ ತಾಲ್ಲೂಕಿನ ಗವಿಗಟ್ಟು ಗ್ರಾಮದ ಸಮೀಪ ಅಕಾಲಿಕ ಮಳೆಯಿಂದ ನೆಲಕ್ಕುರುಳಿದ ಭತ್ತದ ಬೆಳೆ   

ಮಾನ್ವಿ: ತಾಲ್ಲೂಕಿನಲ್ಲಿ ಸುರಿದ ಅಕಾಲಿಕ ಮಳೆಯಿಂದ ಭತ್ತದ ಬೆಳೆ ಹಾನಿಗೀಡಾಗಿದೆ. ಗುರುವಾರ ಸುರಿದ ಮಳೆಯಿಂದ ತಡಕಲ್, ಗವಿಗಟ್ಟು ಸೇರಿದಂತೆ ಹಲವು ಗ್ರಾಮಗಳ ಜಮೀನುಗಳಲ್ಲಿ ಬೆಳೆದ ಅಪಾರ ಪ್ರಮಾಣದ ಭತ್ತದ ಬೆಳೆ ನೆಲಕ್ಕುರುಳಿ ಹಾನಿ ಸಂಭವಿಸಿದೆ ಎಂದು ರೈತರು ತಿಳಿಸಿದ್ದಾರೆ.

ಶನಿವಾರವೂ ಕೂಡ ಮೋಡ ಕವಿದ ವಾತಾವರಣ ಮುಂದುವರೆದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ತಾಲ್ಲೂಕಿನ ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಕೂಡಲೇ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಅಕಾಲಿಕ ಮಳೆಯಿಂದ ಸಂಭವಿಸಿದ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು. ಸರ್ಕಾರಕ್ಕೆ ವರದಿ ಸಲ್ಲಿಸಿ ರೈತರಿಗೆ ಪರಿಹಾರ ಮಂಜೂರು ಮಾಡಿಸಬೇಕು ಎಂದು ಯುವ ಮುಖಂಡ ನಾಗರಾಜ ಹಿಂದಿನಮನೆ ಬಾಗಲವಾಡ ಒತ್ತಾಯಿಸಿದ್ದಾರೆ.

ಮಾನ್ವಿ ತಾಲ್ಲೂಕಿನ ಗವಿಗಟ್ಟು ಗ್ರಾಮದ ಸಮೀಪ ಅಕಾಲಿಕ ಮಳೆಯಿಂದ ಹಾನಿಗೀಡಾದ ಭತ್ತದ ಬೆಳೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT