ADVERTISEMENT

ರಾಯಚೂರು ವಿಶ್ವವಿದ್ಯಾಲಯದಲ್ಲಿ ಹುತಾತ್ಮರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2024, 4:04 IST
Last Updated 31 ಜನವರಿ 2024, 4:04 IST
ರಾಯಚೂರು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಹಾತ್ಮ ಗಾಂಧಿಜಿ ಪುಣ್ಯತಿಥಿ ಪ್ರಯುಕ್ತ ವಿದ್ಯಾರ್ಥಿಗಳು ಮೌನ ಆಚರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು
ರಾಯಚೂರು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಹಾತ್ಮ ಗಾಂಧಿಜಿ ಪುಣ್ಯತಿಥಿ ಪ್ರಯುಕ್ತ ವಿದ್ಯಾರ್ಥಿಗಳು ಮೌನ ಆಚರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು   

ರಾಯಚೂರು: ‘ಮಹಾತ್ಮ ಗಾಂಧಿ ಪುಣ್ಯತಿಥಿಯ ಪ್ರಯುಕ್ತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ರಾಯಚೂರು ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಗೌರವ ಸಲ್ಲಿಸಲಾಯಿತು.

ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಎರಡು ನಿಮಿಷಗಳ ಮೌನಚರಣೆ ಮೂಲಕ ಗೌರವ ಸಮರ್ಪಿಸಿದರು.

ಮಾತೃಭೂಮಿಗಾಗಿ ಹೋರಾಡಿ ಮಡಿದ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಯೋಧರ ಸ್ಮರಣೆ ಮಾಡುವ ದಿನ. ಸತ್ಯ ಅಹಿಂಸೆ ಆದರ್ಶಗಳ ಸಾಕಾರ ಮೂರ್ತಿಯಂತಿದ್ದ ರಾಷ್ಟ್ರಪಿತ ಗಾಂಧಿ ಅವರ ಜೀವನ, ಅವರ ನಡೆ ಮತ್ತು ನುಡಿಗಳ ಬೆಳಕಿನಲ್ಲಿ ಸಮೃದ್ಧ ಸಶಕ್ತ ಭಾರತ ನಿರ್ಮಾಣದ ಹಾದಿಯಲ್ಲಿ ಮುನ್ನಡೆಯೋಣ ಎಂದು ಪ್ರಾರ್ಥಿಸಲಾಯಿತು.

ADVERTISEMENT

ರಾಯಚೂರು ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳು, ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.

ಬಾಲಕರ ಸರ್ಕಾರಿ ಪ್ರೌಢಶಾಲೆ:

‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಸತ್ಯ ಅಹಿಂಸಾ ಮತ್ತು ಜಾತ್ಯತೀತ ತತ್ವವನ್ನು ನಾವೆಲ್ಲ ಜೀವನದ ಅಳವಡಿಸಿಕೊಂಡು ದೇಶವನ್ನು ವಿಶ್ವಕ್ಕೆ ಮಾದರಿಯಾಗಿ ಮಾಡಬೇಕಿದೆ ಎಂದು ಭಾರತ ಸೇವಾದಳ ವಿಭಾಗ ಸಂಘಟಿಕರಾದ ವಿದ್ಯಾಸಾಗರ ಚಿನಮಗೇರಿ ಹೇಳಿದರು.

ನಗರದ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾರತ ಸೇವಾದಳ ವತಿಯಿಂದ ಹುತಾತ್ಮರ ದಿನಾಚರಣೆ ಅಂಗವಾಗಿ ಗಾಂಧೀಜಿ ಭಾವಚಿತ್ರಕ್ಕೆ ಪೂಜೆ ನೆರೆವೇರಿಸಿ ಮಾತನಾಡಿದರು.

ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ರಾಷ್ಟ್ರವಾಗಿದೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿಂತನೆ ತತ್ವ ಮತ್ತು ಕಾರ್ಯಕ್ರಮಗಳ ತಳಹದಿಯ ಮೇಲೆ ನಡೆದು ಬಂದಿದೆ ಎಂದು ಹೇಳಿದರು ,ಇದೇ ಸಂದರ್ಭದಲ್ಲಿ ಎಲ್ಲಾ ಧರ್ಮಗಳ ಪ್ರಾರ್ಥನೆ ಮಾಡಲಾಯಿತು

ಶಾಲೆಯ ಮುಖ್ಯ ಶಿಕ್ಷಕ ಮೈನುಲ್ ಹಕ್ ಅಧ್ಯಕ್ಷತೆ ವಹಿಸಿದ್ದರು ದೈಹಿಕ ಶಿಕ್ಷಣ ಶಿಕ್ಷಕ ಎನ್‌.ಎಚ್ ಬಾಷಾ ಶಿಕ್ಷಕರಾದ ಅರುಣಾಕ್ಷಿ, ತಾಯಮ್ಮ ,ಜಿಲಾನಿ ಉಪಸ್ಥಿತರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.