ರಾಯಚೂರು: ಮಸ್ಕಿ ಉಪಚುನಾವಣೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ಪ್ರತ್ಯೇಕವಾಗಿ ತಮ್ಮ ವಕೀಲರೊಂದಿಗೆ ಬಂದು ಬುಧವಾರ ನಾಮಪತ್ರ ಸಲ್ಲಿಸಿದರು.
ಮಸ್ಕಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಚುನಾವಣಾ ಅಧಿಕಾರಿ ರಾಜಶೇಖರ ಡಂಬಳ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಮಾರ್ಚ್ 29ರಂದು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಅಂದು ಆಯಾ ಪಕ್ಷಗಳ ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.