ಮಸ್ಕಿ: ಸಿಡಿಲು ಬಡಿದು ಮೃತಪಟ್ಟ ತಾಲ್ಲೂಕಿನ ಬಳಗಾನೂರು ಗ್ರಾಮದ ರೈತ ಮಲ್ಲಪ್ಪ ಅವರ ಕುಟುಂಬಕ್ಕೆ ಸರ್ಕಾರದಿಂದ ಬಿಡುಗಡೆಯಾದ ₹5 ಲಕ್ಷ ಪರಿಹಾರದ ಚೆಕ್‌ನ್ನು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರುವಿಹಾಳ ಬುಧವಾರ ವಿತರಿಸಿದರು.
ತಹಶೀಲ್ದಾರ್ ಮಲ್ಲಪ್ಪ ಕೆ.ಯರಗೋಳ ಅವರೊಂದಿಗೆ ಮೃತ ರೈತನ ಮನೆಗೆ ಭೇಟಿ ನೀಡಿದ ಶಾಸಕರು ಮೃತ ವ್ಯಕ್ತಿಯ ಪತ್ನಿಗೆ ಸಾಂತ್ವಾನ ಹೇಳಿ ಚೆಕ್ ವಿತರಿಸಿದರು.
ಕಂದಾಯ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಮುಖಂಡರು ಇದ್ದರು.
ಅ.4 ರಂದು ಸಿಡಿಲು ಬಡಿದು ಮಲ್ಲಪ್ಪ ಮೃತಪಟ್ಟಿದ್ದರು. ಬಳಗಾನೂರು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.