ಮಸ್ಕಿ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲೆಗಳು ಆರಂಭವಾಗಿದ್ದು ಮೊದಲನೇ ದಿನವಾದ ಶುಕ್ರವಾರ ಪಟ್ಟಣದ ವಿವಿಧ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.
135 ವರ್ಷ ಹಳೆಯದಾದ ಸರ್ಕಾರಿ ಪ್ರಾಥಮಿಕ ಕೇಂದ್ರ ಶಾಲೆಯಲ್ಲಿ ಶಾಲೆಯ ಆರಂಭದ ದಿನವೇ ಬೆಳಿಗ್ಗೆ ಮುಖ್ಯ ಶಿಕ್ಷಕರು, ಶಿಕ್ಷಕರು ತಾವೇ ಶಾಲೆಯ ಆವರಣ ಸ್ವಚ್ಚಗೊಳಿಸಿ ತೋರಣ ಕಟ್ಟಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.
ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಸರಸ್ವತಿ ಭಾವಚಿತ್ರಕ್ಕೆ ಪೂಜೆ ಮಾಡಿ ವಿದ್ಯಾರ್ಥಿಗಳಿಗೆ ಗುಲಾಬು ಹೂವು ನೀಡುವ ಮೂಲಕ ಸ್ವಾಗತಿಸಲಾಯಿತು. ಶಾಲೆಯ ಮುಭಾಗದ ರಂಗೋಲಿ ಹಾಕಿ ಸಿಂಗಾರ ಮಾಡಲಾಗಿತ್ತು.
ನಾಯಿಕೋಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಜೊತೆಗೆ ಶಾಲಾ ಆರಂಭದ ದಿನದಂದೇ ಸೇವಾ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಬಸನಗೌಡ ಪಾಟೀಲ ಅವರನ್ನು ಬಿಳ್ಕೋಡಲಾಯಿತು.
ಕಿಲ್ಲಾ, ಧನಗಾರವಾಡಿ, ಸೋಮನಾಥ ನಗರ, ಶಾಲೆ ಸೇರಿದಂತೆ ವಿವಿಧ ಸರ್ಕಾರಿ ಶಾಲೆಗಳಲ್ಲಿ ಹಾಗೂ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಸಂಚಾಲಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಶಾಲಾ ಆರಂಭೋತ್ಸವ ನಡೆಯಿತು. ಸಂಸ್ಥೆಯ ಅಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಪಾಲ್ಗೊಂಡಿದ್ದರು. ವಿವಿಧ ಖಾಸಗಿ ಶಾಲೆಗಳಲ್ಲಿಯೂ ಶಾಲಾ ಪ್ರಾರಂಭೋತ್ಸವ ಸಡಗರದಿಂದ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.