ADVERTISEMENT

ಸಚಿವ ದಿನೇಶ್ ಗುಂಡೂರಾವ್ ನಾಳೆ ರಾಯಚೂರಿಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 14:11 IST
Last Updated 17 ಸೆಪ್ಟೆಂಬರ್ 2024, 14:11 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್   

ರಾಯಚೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೆ.18ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬುಧವಾರ ಬೆಳಿಗ್ಗೆ 8 ಗಂಟೆಗೆ ಕಲಬುರಗಿಯಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ರಾಯಚೂರಿಗೆ ಬರಲಿದ್ದಾರೆ. ಬೆಳಿಗ್ಗೆ 10.30 ಗಂಟೆಗೆ ನಗರದ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11.30ಕ್ಕೆ ರಾಯಚೂರು ತಾಲ್ಲೂಕಿನ ಗುಂಜಳಿ ಹಾಗೂ ಗಿಲ್ಲೇಸೂಗೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.

ಸಂಜೆ 6.40ಗಂಟೆಗೆ ರಾಯಚೂರಿನಿಂದ ರೈಲ್ವೆ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಜಿಲ್ಲಾ ಕೈಗಾರಿಕಾ ಸಹಕಾರ ಸಂಘ: ವಾರ್ಷಿಕ ಮಹಾಸಭೆ ಸೆ.21ಕ್ಕೆ

ರಾಯಚೂರು: ಜಿಲ್ಲಾ ಕೈಗಾರಿಕಾ ಸಬರಾಜು ಮತ್ತು ಮಾರಾಟ ಸಹಕಾರ ಸಂಘ ನಿಯಮಿತ ವತಿಯಿಂದ ಸಂಘದ 29ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಡಿ.ವೀರೇಶಕುಮಾರ ಅಧ್ಯಕ್ಷತೆಯಲ್ಲಿ ಸೆ.21ರಂದು ನಡೆಯಲಿದೆ.

ಸಂಘದ ಸದಸ್ಯರಿಗೆ ಈಗಾಗಲೇ ನೋಟಿಸುಗಳನ್ನು ಕಳುಹಿಸಲಾಗಿದೆ ಎಂದು ಸಂಘದ ವ್ಯವಸ್ಥಾಪಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನ ಕೈಗೊಳ್ಳಿ’

ರಾಯಚೂರು: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸುವ ಜಲಸಂರಕ್ಷಣೆ ಕಾಮಗಾರಿಗಳ ಸ್ವಚ್ಛತೆ ಹಾಗೂ ಗ್ರಾಮಗಳಲ್ಲಿ ನೈರ್ಮಲ್ಯಕ್ಕಾಗಿ ಬೂದು ನೀರು ನಿರ್ವಹಣೆ ಕುರಿತು ವ್ಯಾಪಕ ಜನಜಾಗೃತಿ ಮೂಡಿಸಲು ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿಸಿ ಸಿಇಒ ರಾಹುಲ್ ಪಾಂಡ್ವೆ ತಿಳಿಸಿದ್ದಾರೆ.

ಅಕ್ಟೋಬರ್ 1ರ ವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನ ನಡೆಯಲಿದೆ. ಸ್ವ-ಸಹಾಯ ಸಂಘ, ನಾಗರಿಕ ಸೇವಾ ಸಂಘ, ಸಮುದಾಯ ಸಂಘಟನೆಗಳು, ಶಾಲಾ ಕಾಲೇಜಿನ ಎನ್‌ಎಸ್‍ಎಸ್, ಎನ್‌ಸಿಸಿ ಮಕ್ಕಳು, ಗ್ರಾಮಸ್ಥರ ಸಹಯೋಗದಲ್ಲಿ ನರೇಗಾ ಯೋಜನೆಯಡಿ ಕಲ್ಯಾಣಿ, ಗೋಕಟ್ಟೆ, ಕಟ್ಟೆ, ಕೆರೆಯೊಂದನ್ನು ಶ್ರಮದಾನ ಮೂಲಕ ಸ್ವಚ್ಛಗೊಳಿಸಲಾಗುವುದು ಎಂದು ಹೇಳಿದ್ದಾರೆ.

2025-26ನೇ ಸಾಲಿನಲ್ಲಿ ಬೂದು ನೀರು ಮುಕ್ತ ಗ್ರಾಮಗಳ ನಿರ್ಮಾಣಕ್ಕಾಗಿ ಪ್ರತಿ ತಾಲ್ಲೂಕಿಗೆ ಒಂದು ಗ್ರಾಮ ಆಯ್ಕೆ ಮಾಡಿಕೊಂಡು ಎಲ್ಲ ಫಲಾನುಭವಿಗಳಿಂದ ಬಚ್ಚಲುಗುಂಡಿ ನಿರ್ಮಾಣಕ್ಕೆ ಬೇಡಿಕೆ ಸ್ವೀಕರಿಸಿ ಅಕ್ಟೋಬರ್ 2ರಿಂದ ನಡೆಯುವ ಕಾರ್ಮಿಕ ಆಯವ್ಯಯದಲ್ಲಿ ಸೇರ್ಪಡೆಗೊಳಿಸುವುದು. ಸಾರ್ವಜನಿಕರಿಗೆ ಘನ ತ್ಯಾಜ್ಯದಿಂದ ಆಗುವ ಅಪಾಯಗಳು ಹಾಗೂ ಅವುಗಳನ್ನು ಮನೆ ಹಂತದಲ್ಲಿಯೇ ಸಮರ್ಪಕವಾಗಿ ನಿರ್ವಹಿಸುವ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.