ADVERTISEMENT

ಖರ್ಗೆ ಭೇಟಿ ಮಾಡಿದ ಸಚಿವರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 15:38 IST
Last Updated 5 ಜುಲೈ 2024, 15:38 IST
ಬೆಂಗಳೂರಲ್ಲಿ ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಣ್ಣ ನೀರಾವರಿ ಸಚಿವ ಎನ್‌.ಎಸ್. ಬೋಸರಾಜು ಹಾಗೂ ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ ಭೇಟಿ ಮಾಡಿದರು
ಬೆಂಗಳೂರಲ್ಲಿ ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಣ್ಣ ನೀರಾವರಿ ಸಚಿವ ಎನ್‌.ಎಸ್. ಬೋಸರಾಜು ಹಾಗೂ ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ ಭೇಟಿ ಮಾಡಿದರು   

ರಾಯಚೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ  ಖರ್ಗೆ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಸಣ್ಣ ನೀರಾವರಿ ಸಚಿವ ಎನ್‌.ಎಸ್.ಬೋಸರಾಜು ಹಾಗೂ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಶರಣಬಸಪ್ಪ ದರ್ಶನಾಪೂರ ಅವರು ಸೌಹಾರ್ದಯುತವಾಗಿ ಭೇಟಿ ಮಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪೂರಕವಾದ ವಿಷಯಗಳ ಬಗ್ಗೆ ಚರ್ಚಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಜನರು ಲೋಕಸಭಾ ಚುನಾವಣೆಯಲ್ಲಿ ಐದಕ್ಕೆ ಐದು ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ. ಈ ಭಾಗದ ಜನರ ನಿರೀಕ್ಷೆಯಂತೆ ಕೆಲಸ ಮಾಡಬೇಕಾದ ಜವಾಬ್ದಾರಿ ಪಕ್ಷದ ಎಲ್ಲರ ಮೇಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಚಿವರಿಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.