ADVERTISEMENT

ಮಾನ್ವಿ | ಎಸ್.ಟಿ ಪ್ರಮಾಣ ಪತ್ರ ದುರ್ಬಳಕೆ: ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2024, 14:08 IST
Last Updated 9 ಮಾರ್ಚ್ 2024, 14:08 IST
ಜೆಲ್ಲಿ ಆಂಜನೇಯ
ಜೆಲ್ಲಿ ಆಂಜನೇಯ   

ಮಾನ್ವಿ: ‘ಕಾನೂನು ಬಾಹಿರವಾಗಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ನೀಡಿದ ಅಧಿಕಾರಿಗಳು ಹಾಗೂ ಪಡೆದಿರುವ ವ್ಯಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮಾಜಿ ಯೋಧ ಜೆಲ್ಲಿ ಆಂಜನೇಯ ನೀರಮಾನ್ವಿ ಒತ್ತಾಯಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದುಳಿದ ವರ್ಗದಲ್ಲಿ ಬರುವ ಕುರುಬ ಜಾತಿಯವರು ಗೊಂಡ, ಕಾಡು ಕುರುಬ, ರಾಜಗೊಂಡ ಜಾತಿಯ ಹೆಸರಿನಲ್ಲಿ ಮತ್ತು ಕಬ್ಬಲಿಗ, ಗಂಗಾಮತಸ್ಥ ಜಾತಿಯವರು ಪರಿವಾರ, ತಳವಾರ ಹೆಸರಿನಲ್ಲಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ’ ಎಂದು ದೂರಿದರು.

‘ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಶೇ 7ರಷ್ಟು ಹೆಚ್ಚಿಸಿರುವುದನ್ನು ಅನುಷ್ಠಾನಗೊಳಿಸಬೇಕು. ಪ್ರತಿ ತಾಲ್ಲೂಕಿಗೆ ಏಕಲವ್ಯ ವಸತಿ ಶಾಲೆ ಮಂಜೂರು ಮಾಡಬೇಕು. ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಸೇರಿದಂತೆ ವಾಲ್ಮೀಕಿ ಸಮುದಾಯದ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಅವರು ಮನವಿ ಮಾಡಿದರು.

ADVERTISEMENT

ಪುರಸಭೆ ಸದಸ್ಯ ವೆಂಕಟೇಶ ನಾಯಕ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.