ADVERTISEMENT

ರಾಯಚೂರು | ವಸತಿ ನಿಲಯಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಶಾಸಕ ಶಿವರಾಜ ಪಾಟೀಲ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 14:29 IST
Last Updated 2 ಜುಲೈ 2024, 14:29 IST

ರಾಯಚೂರು: ನಗರದಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಸತಿ ನಿಲಯಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದು ಶಾಸಕ ಡಾ.ಶಿವರಾಜ ಪಾಟೀಲ ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಡಿದರು.

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸೌಲಭ್ಯ ನೀಡಲಾಗುತ್ತಿದೆ. ವಸತಿ ನಿಲಯದಲ್ಲಿನ ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. 

ADVERTISEMENT

ನಗರದ ಆರ್‌ಟಿಓ ಕಚೇರಿಯಿಂದ ಕೃಷಿ ವಿಶ್ವವಿದ್ಯಾಲಯದವರೆಗೆ ಹಾಗೂ ಹೈದರಾಬಾದ್ ರಸ್ತೆಯ ರಿಮ್ಸ್ ಕಾಲೇಜುವರೆಗೂ ರಸ್ತೆ ವಿಭಜಕಗಳ ನಡುವೆ ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದರು.

ವಿವಿಧ ಇಲಾಖೆಯ ಅಧಿಕಾರಿಗಳು ಸಭೆಗೆ ಗೈರಾಗಿದ್ದರಿಂದ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಗೈರಾದವರಿಗೆ ಕಾರಣ ಕೇಳಿ ಅವರಿಗೆ ನೋಟಿಸ್‌ ನೀಡಬೇಕು. ಮುಂದಿನ ಸಭೆಯಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ಸುರೇಶ್ ವರ್ಮಾ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.