ADVERTISEMENT

ಕವಿತಾಳ: ಭತ್ತ ಬೆಳೆ ಹಾನಿ ಪ್ರದೇಶಕ್ಕೆ ಶಾಸಕ ಬಸನಗೌಡ ತುರ್ವಿಹಾಳ ಭೇಟಿ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2024, 15:50 IST
Last Updated 18 ನವೆಂಬರ್ 2024, 15:50 IST
ಕವಿತಾಳ ಸಮೀಪದ ತೋರಣದಿನ್ನಿಗೆ ಸೋಮವಾರ ಭೇಟಿ ನೀಡಿದ ಶಾಸಕ ಆರ್.‌ಬಸನಗೌಡ ತುರ್ವಿಹಾಳ ಭತ್ತದ ಬೆಳೆ ಹಾನಿ ಪರಿಶೀಲಿಸಿದರು
ಕವಿತಾಳ ಸಮೀಪದ ತೋರಣದಿನ್ನಿಗೆ ಸೋಮವಾರ ಭೇಟಿ ನೀಡಿದ ಶಾಸಕ ಆರ್.‌ಬಸನಗೌಡ ತುರ್ವಿಹಾಳ ಭತ್ತದ ಬೆಳೆ ಹಾನಿ ಪರಿಶೀಲಿಸಿದರು   

ಕವಿತಾಳ: ‘ಅಕಾಲಿಕ ಮಳೆಯಿಂದ ಭತ್ತದ ಬೆಳೆ ನೆಲಕಚ್ಚಿದ ಬಗ್ಗೆ ಜಿಲ್ಲಾಧಿಕಾರಿ ಮತ್ತು ಕೃಷಿ ಸಚಿವರಿಗೆ ಮಾಹಿತಿ ನೀಡಲಾಗಿದೆ. ಸಮೀಕ್ಷೆ ನಡೆಸಿ ಶೀಘ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು’ ಎಂದು ಶಾಸಕ ಆರ್‌ .ಬಸನಗೌಡ ತುರ್ವಿಹಾಳ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಮೀಪದ ತೋರಣದಿನ್ನಿ, ಹಿರೇದಿನ್ನಿ ತಾಯಮ್ಮ ಕ್ಯಾಂಪ್, ಮರಕಮದಿನ್ನಿ ಮತ್ತು ಮಲ್ಕಾಪುರ ಗ್ರಾಮಗಳಿಗೆ ಸೋಮವಾರ ಭೇಟಿ ನೀಡಿ ಮಳೆಯಿಂದ ಹಾನಿಯಾದ ಭತ್ತದ ಬೆಳೆ ಪರಿಶೀಲಿಸಿ ಮಾತನಾಡಿದ ಅವರು, ‘ಹಾನಿ ಪ್ರಮಾಣ ಆಧರಿಸಿ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು.

ತಹಶೀಲ್ದಾರ್‌ ಮಲ್ಲಪ್ಪ, ಕೃಷಿ ಇಲಾಖೆ ಅಧಿಕಾರಿಗಳು ಮತ್ತು ರೈತ ಮುಖಂಡರು ಉಪಸ್ಥಿತರಿದ್ದರು.

ADVERTISEMENT
ಕವಿತಾಳ ಸಮೀಪದ ತೋರಣದಿನ್ನಿಗೆ ಸೋಮವಾರ ಭೇಟಿ ನೀಡಿದ ಶಾಸಕ ಆರ್.‌ ಬಸನಗೌಡ ತುರ್ವಿಹಾಳ ಭತ್ತದ ಬೆಳೆ ಹಾನಿ ಕುರಿತು ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.