ADVERTISEMENT

ಮಸ್ಕಿ ಬೈಪಾಸ್ ರಸ್ತೆ | ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಲು ಸೂಚನೆ: ಬಸನಗೌಡ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 15:35 IST
Last Updated 5 ಜುಲೈ 2024, 15:35 IST
ಆರ್.ಬಸನಗೌಡ ತುರುವಿಹಾಳ
ಆರ್.ಬಸನಗೌಡ ತುರುವಿಹಾಳ   

ಮಸ್ಕಿ: ಪಟ್ಟಣದ ಬೈಪಾಸ್ ರಸ್ತೆಯ ಭೂ ಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಿ ಶೀಘ್ರ ಕಾಮಗಾರಿ ಶುರು ಮಾಡುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಶಾಸಕ ಆರ್. ಬಸನಗೌಡ ತುರುವಿಹಾಳ ತಿಳಿಸಿದರು.

ಬೈಪಾಸ್ ರಸ್ತೆ ನಿರ್ಮಾಣಕ್ಕೆ ಸರ್ವೇ ಮಾಡಿ ಭೂಮಿ ಗುರುತಿಸಲಾಗಿದೆ. ರೈತರಿಗೆ ಭೂ ಪರಿಹಾರ ಬೇಗ ವಿತರಿಸಿ ಭೂಮಿ ಸ್ವಾಧೀನಪಡಿಸಿಕೊಂಡು ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಬೆಂಗಳೂರಿನಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಯಿತು ಎಂದು ಆರ್.ಬಸನಗೌಡ ತುರುವಿಹಾಳ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಮಸ್ಕಿ ಪಟ್ಟಣದಲ್ಲಿ ರಸ್ತೆ ವಿಭಜಕ ಹಾಗೂ ಸರ್ವೀಸ್ ರಸ್ತೆ ಕಾಮಗಾರಿ ವಿಳಂಬವಾಗಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಹೆದ್ದಾರಿ ಪ್ರಾಧಿಕಾರದ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯಕುಮಾರ ಅವರಿಗೆ ಸೂಚಿಸಲಾಯಿತು. ಈ ಕಾಮಗಾರಿಯನ್ನು ಎರಡು ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಅವರು ಹೇಳಿದರು.

ADVERTISEMENT

ಸಿಂಧನೂರು ಹಳ್ಳದ ಸೇತುವೆ ಮೇಲೆ ಡಾಂಬರ್ ಹಾಕದ ಕಾರಣ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಕೂಡಲೇ ಸೇತವೆ ಮೇಲೆ ಡಾಂಬರ್ ಹಾಕುವ ಮೂಲಕ ಸಮಸ್ಯೆಗೆ ಬಗೆ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.