ADVERTISEMENT

ರಾಯಚೂರಿಗೆ ನೂತನ ಎಸ್‌ಪಿ ಎಂ. ಪುಟ್ಟಮಾದಯ್ಯ

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 7:16 IST
Last Updated 4 ಜುಲೈ 2024, 7:16 IST
<div class="paragraphs"><p>ಎಂ. ಪುಟ್ಟಮಾದಯ್ಯ</p></div>

ಎಂ. ಪುಟ್ಟಮಾದಯ್ಯ

   

ರಾಯಚೂರು: ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಂ.ಪುಟ್ಟಮಾದಯ್ಯ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಜುಲೈ 3ರಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ಅವರನ್ನು ಕೋಲಾರಕ್ಕೆ ವರ್ಗಾವಣೆ ಮಾಡಲಾಗಿತ್ತು. ಗುರುವಾರ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದಲ್ಲಿ ವಿಶೇಷ ತನಿಖಾ ದಳದ ಪೊಲೀಸ್‌ ಅಧೀಕ್ಷಕರಾಗಿದ್ದ ಅವರನ್ನು ರಾಯಚೂರಿಗೆ ವರ್ಗಾವಣೆ ಮಾಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.