ಸಿಂಧನೂರು: ನಗರದ ಪಿಡಬ್ಲ್ಯೂಡಿ ಕ್ಯಾಂಪ್‌ನಲ್ಲಿರುವ ಗ್ರಾಮೀಣ ಪೊಲೀಸ್ ಠಾಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಸೋಮವಾರ ಭೇಟಿ ನೀಡಿ ಜಪ್ತಿ ಮಾಡಿದ ಮರಳನ್ನು ನಿಯಮಾನುಸಾರ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಾತನಾಡಿದ ಅವರು,‘ತಾಲ್ಲೂಕಿನ ಗೋಮರ್ಸಿ ಹಳ್ಳ, ತುಂಗಭದ್ರಾ ನದಿ ಪಾತ್ರದ ಗ್ರಾಮಗಳಾದ ಅಲಬನೂರು, ವಳಬಳ್ಳಾರಿ, ಹರೇಟನೂರು, ಕೆಂಗಲ್, ಸಾಲಗುಂದಾದಿಂದ ಟಿಪ್ಪರ್, ಟ್ರ್ಯಾಕ್ಟರ್‌ಗಳಲ್ಲಿ ಮರಳು ತುಂಬಿ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದೆ ಎಂದು ದೂರುಗಳು ಬರುತ್ತಿವೆ. ಸರ್ಕಾರಕ್ಕೆ ರಾಜಧನ ಭರಿಸದೆ ಮರಳು ಸಾಗಣೆ ಮಾಡುವುದು ಅಪರಾಧವಾಗಿದೆ. ಆದ್ದರಿಂದ ಮರಳು ಅಕ್ರಮ ಸಾಗಣೆ ಮಾಡುವ ಟಿಪ್ಪರ್, ಟ್ರ್ಯಾಕ್ಟರ್‌ಗಳನ್ನು ಮುಲಾಜಿಲ್ಲದೆ ಜಪ್ತಿ ಮಾಡಿ ಕಾನೂನು ಕ್ರಮ ಜರುಗಿಸಬೇಕು’ ಎಂದು ಸೂಚನೆ ನೀಡಿದರು.
ಡಿವೈಎಸ್‍ಪಿ ಬಿ.ಎಸ್.ತಳವಾರ, ಸರ್ಕಲ್ ಇನ್‌ಸ್ಪೆಕ್ಟರ್ ವೀರಾರೆಡ್ಡಿ, ಗ್ರಾಮೀಣ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಮಹ್ಮದ್ ಇಸಾಕ್, ಸಂಚಾರ ಪೊಲೀಸ್ ಠಾಣೆಯ ವೆಂಕಟೇಶ ಚವ್ಹಾಣ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.