ADVERTISEMENT

ರಾಯಚೂರು: ಇಂಟಿಗ್ರೇಟೆಡ್ ಕೋರ್ಸ್ ಹೆಸರಿನಲ್ಲಿ ಶುಲ್ಕ ಹೆಚ್ಚಳಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 14:31 IST
Last Updated 2 ಜುಲೈ 2024, 14:31 IST
<div class="paragraphs"><p>ಇಂಟಿಗ್ರೇಟೆಡ್ ಕೋರ್ಸ್‌ಗಳ ಹೆಸರಿನಲ್ಲಿ ಖಾಸಗಿ ಪದವಿ ಪೂರ್ವ&nbsp; ಕಾಲೇಜುಗಳ ಶುಲ್ಕ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ (ಎಐಆರ್ ಎಸ್ಒ) ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ&nbsp; ರಾಯಚೂರಿನ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು.&nbsp;&nbsp;</p></div>

ಇಂಟಿಗ್ರೇಟೆಡ್ ಕೋರ್ಸ್‌ಗಳ ಹೆಸರಿನಲ್ಲಿ ಖಾಸಗಿ ಪದವಿ ಪೂರ್ವ  ಕಾಲೇಜುಗಳ ಶುಲ್ಕ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ (ಎಐಆರ್ ಎಸ್ಒ) ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ  ರಾಯಚೂರಿನ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು.  

   

ರಾಯಚೂರು: ಇಂಟಿಗ್ರೇಟೆಡ್ ಕೋರ್ಸ್‌ಗಳ ಹೆಸರಿನಲ್ಲಿ ಖಾಸಗಿ ಪದವಿ ಪೂರ್ವ  ಕಾಲೇಜುಗಳ ಶುಲ್ಕ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ (ಎಐಆರ್‌ಎಸ್ಒ) ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಖಾಸಗಿ ಪದವಿ ಪೂರ್ವ ಕಾಲೇಜುಗಳು ನೀಟ್, ಸಿಇಟಿ, ಜೆಇಇ ಒದಗಿಸಲಾದ ಕೋಚಿಂಗ್ ತರಗತಿಗಳ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಶೇ 100ರಷ್ಟು ಶುಲ್ಕ ಹೆಚ್ಚಳ ಮಾಡಿದೆ. ಕರ್ನಾಟಕ ಶಿಕ್ಷಣ ಕಾಯಿದೆ - 1983ರ ಅಡಿಯಲ್ಲಿ, ಶುಲ್ಕ ಹೆಚ್ಚಳ ತಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ತಿಳಿಸಿದರು.

ADVERTISEMENT

ಕಾಲೇಜುಗಳನ್ನು ನೀಟ್, ಸಿಇಟಿ, ಜೆಇಇ  ಹೆಸರಿನಲ್ಲಿ ವಿಭಜಿಸಲಾಗುತ್ತಿದೆ. ಕಾಲೇಜಿನ ಶುಲ್ಕವನ್ನು ಹೆಚ್ಚಿಸದಂತೆ ತಡೆಯಬಹುದು. ಆದರೆ, ಕಳೆದ ಎರಡು ವರ್ಷಗಳಿಂದ ಈ ಮಾರ್ಗಸೂಚಿಗಳನ್ನು ನೀಡುವುದನ್ನು ಸರ್ಕಾರ ನಿಲ್ಲಿಸಿದೆ ಎಂದು ದೂರಿದರು.

ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸಲು ಮತ್ತು ಖಾಸಗಿ ಕಾಲೇಜು-ಕೋಚಿಂಗ್ ಸೆಂಟರ್ ಗಳು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಭಾರಿ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ. ಶಿಕ್ಷಣ ಸಂಸ್ಥೆಗಳಿಗೆ ಲಾಬ ಮಾಡಿಕೊಡುವುದೇ ಇದರ ಉದ್ದೇಶವಾಗಿದೆ. ಶುಲ್ಕ ಹೆಚ್ಚಳವನ್ನು ನಿಯಂತ್ರಿಸಿ  ಮಾರ್ಗಸೂಚಿಗಳನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ರಾಜ್ಯ ಘಟಕದ ಸಂಚಾಲಕ ಅಜೀಜ್ ಜಾಗೀರದಾರ, ಜಿಲ್ಲಾ ಘಟಕದ ಕಾರ್ಯದರ್ಶಿ ನಿರಂಜನ್ ಕುಮಾರ, ಆದೇಶ ನಗನೂರು, ಯಲ್ಲಪ್ಪ, ಅಬ್ಬಾಸಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.