ತುರ್ವಿಹಾಳ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿ ಉತ್ತೇಜಿಸಲು ಆರ್ಥಿಕ ವರ್ಷ ಪ್ರಾರಂಭವಾದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುತ್ತಿದ್ದು, ರಿಯಾಯಿತಿ ಅವಧಿಯನ್ನು ಸೆ.14ರವರೆಗೆ ವಿಸ್ತರಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ಸಾಬಣ್ಣ ಕಟ್ಟೆಕಾರ ತಿಳಿಸಿದ್ದಾರೆ.
ಸೋಮವಾರ ಹೇಳಿಕೆ ನೀಡಿರುವ ಅವರು,‘ನಗರದ ಎಲ್ಲಾ ಆಸ್ತಿ ಮಾಲೀಕರು ರಿಯಾಯಿತಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ನಗರದ ಅಭಿವೃದ್ಧಿಗೆ ಸಹಕರಿಸಬೇಕು’ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.