ADVERTISEMENT

ವಕೀಲ ಕೃಷ್ಣನ್ ಹತ್ಯೆ ಖಂಡಿಸಿ ಮನವಿ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 16:09 IST
Last Updated 22 ನವೆಂಬರ್ 2024, 16:09 IST
ರಾಯಚೂರಿನಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾಡಳಿತದ ಮೂಲಕ ತಮಿಳುನಾಡು ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಲಾಯಿತು
ರಾಯಚೂರಿನಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾಡಳಿತದ ಮೂಲಕ ತಮಿಳುನಾಡು ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಲಾಯಿತು   

ರಾಯಚೂರು: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ನ್ಯಾಯಾಲಯದ ಆವರಣದಲ್ಲಿ ನ.20ರಂದು ನಡೆದ ವಕೀಲ ಕೃಷ್ಣನ್ ಕೊಲೆಯನ್ನು ಖಂಡಿಸಿ ರಾಯಚೂರು ಜಿಲ್ಲಾ ವಕೀಲರ ಸಂಘದ ವತಿಯಿಂದ ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು ಎಂದು ಜಿಲ್ಲಾಡಳಿತದ ಮೂಲಕ ತಮಿಳುನಾಡು ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ಹೊಸೂರು ನ್ಯಾಯಾಲಯದ ಆವರಣದಲ್ಲಿ ಆರೋಪಿ ಆನಂದ, ವಕೀಲ ಕೃಷ್ಣನ್ ಅವರ ಹತ್ಯೆಯಿಂದ ವಕೀಲರು ಭಯಭೀತರಾಗಿದ್ದು, ವಕೀಲರಿಗೆ ರಕ್ಷಣೆ ಇಲ್ಲದಂತಾಗಿದೆ. ಜಿಲ್ಲೆ ಸೇರಿ ರಾಜ್ಯದ ಎಲ್ಲ ನ್ಯಾಯಾಲಯಗಳ ಆವರಣದ ಬಳಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಹಾಗೂ ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ವಕೀಲರು ಮನವಿ ಮಾಡಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಪ್ಪ ಭಂಡಾರಿ, ವಕೀಲರಾದ ಹನುಮಂತ ಮೇಟಿ, ಸೈಯದ್ ನವಾಜ್ ಪಾಶ, ಜಹೀರ್ ಪಾಶ ಮತ್ತಿತರರು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.