ADVERTISEMENT

ರಾಯಚೂರು | ಪೊಲೀಸ್ ಕಾನ್‍ಸ್ಟೆಬಲ್ ಪರೀಕ್ಷೆ: ಸುಸೂತ್ರ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2024, 16:03 IST
Last Updated 25 ಫೆಬ್ರುವರಿ 2024, 16:03 IST
ರಾಯಚೂರಿನ ಎಸ್‌ಆರ್‌ಪಿಎಸ್‌ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್ ಕಾನ್‍ಸ್ಟೆಬಲ್ ಪರೀಕ್ಷೆ ಬರೆದು ಹೊರಗೆ ಬಂದ ಅಭ್ಯರ್ಥಿಗಳು
ರಾಯಚೂರಿನ ಎಸ್‌ಆರ್‌ಪಿಎಸ್‌ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್ ಕಾನ್‍ಸ್ಟೆಬಲ್ ಪರೀಕ್ಷೆ ಬರೆದು ಹೊರಗೆ ಬಂದ ಅಭ್ಯರ್ಥಿಗಳು   

ರಾಯಚೂರು: ನಗರದ ಪ್ರಮುಖ ಕಾಲೇಜುಗಳಲ್ಲಿ ಸ್ಥಾಪಿಸಿದ್ದ ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಪೊಲೀಸ್ ಕಾನ್‍ಸ್ಟೆಬಲ್ ಪರೀಕ್ಷೆ ನಡೆಯಿತು.

ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಸಿಪಿಐ, ಪಿಎಸ್‌ಐ ಹಾಗೂ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಬೆಳಿಗ್ಗೆ ಪ್ರವೇಶ ದ್ವಾರದಲ್ಲೇ ತಪಾಸಣೆ ನಡೆಸಿ ಅಭ್ಯರ್ಥಿಗಳನ್ನು ಪರೀಕ್ಷಾ ಕೆಂದ್ರಗಳಿಗೆ ಕಳಿಸಿಕೊಡಲಾಯಿತು.

ಪೊಲೀಸ್ ಕಾನ್‍ಸ್ಟೆಬಲ್ ಪರೀಕ್ಷೆ ಹಿನ್ನಲೆ ಮೊದಲೇ ಪುರುಷ, ಮಹಿಳೆ ಮತ್ತು ಲೈಂಗಿಕ ಅಲ್ಪಸಂಖ್ಯಾತ
ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿತ್ತು. ನಗರದ ಸ್ಟೇಷನ್‌ ರಸ್ತೆಯಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲೇ ಅಧಿಕ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.