ADVERTISEMENT

ರಾಯಚೂರು | ಪೊಲೀಸ್ ಹುತಾತ್ಮರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 2:50 IST
Last Updated 21 ಅಕ್ಟೋಬರ್ 2024, 2:50 IST
   

ರಾಯಚೂರು: ಜಿಲ್ಲಾ ಪೊಲೀಸ್‌ ಮುಖ್ಯಾಲಯದ ಆವರಣದಲ್ಲಿರುವ ಹುತಾತ್ಮಕರ ಸ್ಮಾರಕದ ಬಳಿ ಪೊಲೀಸ್ ಹುತಾತ್ಮರ ದಿನ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕೆ. ನಿತೀಶ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ., ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ–1 ಆರ್‌.ಶಿವಕುಮಾರ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ–2 ಜಿ.ಹರೀಶ್‌ ಅವರು ಹುತಾತ್ಮರಿಗೆ ಗೌರವ ಸಲ್ಲಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪೊಲೀಸ್‌ ಹುತಾತ್ಮರ ಸ್ಮಾರಕಕ್ಕೆ ಅತಿಥಿಗಳು ಪುಷ್ಪಗುಚ್ಛವಿರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೊಲೀಸ್‌ ಬ್ಯಾಂಡ್‌ನವರು ಶೋಕಗೀತೆ ನುಡಿಸಿದರು. ನಂತರ ಪೊಲೀಸ್‌ ಶಸ್ತ್ರಪಡೆಯ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸ್‌ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಪೊಲೀಸ್‌ ಧ್ವಜ ಅರ್ಧಕ್ಕೆ ಇಳಿಸಿ ಎರಡು ನಿಮಿಷ ಮೌನ ಆಚರಿಸಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.