ADVERTISEMENT

ರಾಯಚೂರು: ವರ್ಷ ಪೂರೈಸಿದ ಏಮ್ಸ್‌ ಹೋರಾಟ

​ಪ್ರಜಾವಾಣಿ ವಾರ್ತೆ
Published 13 ಮೇ 2023, 5:29 IST
Last Updated 13 ಮೇ 2023, 5:29 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ರಾಯಚೂರು: ಜಿಲ್ಲೆಯಲ್ಲಿ ಅಖಿಲ ಭಾರತೀಯ ವೈದ್ಯವಿಜ್ಞಾನ ಸಂಸ್ಥೆ (ಏಮ್ಸ್‌) ಸ್ಥಾಪಿಸುವಂತೆ ಒತ್ತಾಯಿಸಿ ಜಿಲ್ಲಾ ಏಮ್ಸ್‌ ಹೋರಾಟ ಸಮಿತಿ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭಿಸಿರುವ ಅನಿರ್ದಿಷ್ಟಾವಧಿ ಧರಣಿ ಶನಿವಾರ ಒಂದು ವರ್ಷ ಪೂರ್ಣಗೊಳಿಸಿತು.

‘ಏಮ್ಸ್‌ಗೆ ಪರ್ಯಾಯ ವೈದ್ಯಕೀಯ ಸಂಸ್ಥೆ ರಾಯಚೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಿಸಿದ್ದರು. ಏಮ್ಸ್‌ಗೆ ಪರ್ಯಾಯ ಎನ್ನುವುದು ದೇಶದಲ್ಲಿಯೇ ಇಲ್ಲ. ರಾಯಚೂರು ಜನರ ಕಣ್ಣೊರೆಸುವ ತಂತ್ರವನ್ನು ರಾಜ್ಯ ಸರ್ಕಾರ ಮಾಡಿದೆ’ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಧರಣಿಯನ್ನು ಮುಂದುವರಿಸಿದ್ದಾರೆ.

‘ಪೂರ್ಣಪ್ರಮಾಣದ ಏಮ್ಸ್‌ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಅಧಿಕೃತ ಪ್ರಸ್ತಾವ ಕಳುಹಿಸುವವರೆಗೂ ಧರಣಿ  ಮುಂದುವರಿಸುತ್ತೇವೆ’  ಎಂದು ಹೋರಾಟಗಾರರು ತಿಳಿಸಿದ್ದಾರೆ. 2022ರ ಮೇ 12ರಂದು ಧರಣಿ ಆರಂಭವಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.