ಮಂತ್ರಾಲಯ (ರಾಯಚೂರು): ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂತ್ರಾಲಯದಲ್ಲಿ ಬುಧವಾರ ಗುರು ರಾಯರ ಮಧ್ಯಾರಾಧನೆ ವಿಜೃಂಭಣೆಯಿಂದ ಜರುಗಿತು.
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳ ನೇತೃತ್ವದಲ್ಲಿ ಬೆಳಿಗ್ಗೆ ವಿಶೇಷ ಮಹಾಪಂಚಾಮೃತ ಅಭಿಷೇಕ ಹಾಗೂ ಪೂಜೆ ನಡೆಯಿತು. ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ದೇಶದ ವಿವಿಧೆಡೆಯ ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು.
ಸ್ವರ್ಣ ಕವಚ ರಾಯರ ವೃಂದಾವನಕ್ಕೆ ಪುಷ್ಪಗಳಿಂದ ಅಲಂಕರಿಸ ಲಾಗಿತ್ತು. ಬೆಳಗಿನ ಜಾವದಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು ಅದ್ದೂರಿಯಾಗಿ ಸಂಪನ್ನಗೊಂಡವು. ರಾತ್ರಿ ಪ್ರಸಿದ್ಧ ಕಲಾವಿದರಿಂದ ಸಂಗೀತ, ನೃತ್ಯ ಕಾರ್ಯಕ್ರಮಗಳು ನಡೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.