ADVERTISEMENT

ರಾಯಚೂರು: ಬೆಂಗಳೂರಿನ ಹಸಿರು ಪ್ರತಿಷ್ಠಾನದ ವಿರುದ್ಧ ಧಿಕ್ಕಾರದ ಘೋಷಣೆ

371(ಜೆ) ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 7:04 IST
Last Updated 15 ಜೂನ್ 2024, 7:04 IST
   

ರಾಯಚೂರು: 371(ಜೆ) ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ವಿವಿಧ ಸಂಘಟನೆಗಳು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದವು.

ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಂವಿಧಾನದ 371(ಜೆ) ಕಲಂ ಅಡಿಯಲ್ಲಿ ವಿಶೇಷ ಸ್ಥಾನಮಾನ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಹಸಿರು ಪ್ರತಿಷ್ಠಾನ ಪ್ರತಿಭಟನೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ 371(ಜೆ) ವಿಶೇಷ ಸ್ಥಾನಮಾನ ನೀಡಲು ಆಗ್ರಹಿಸಿ ಈ ಭಾಗದ ಜನ ಸಾಕಷ್ಟು ಹೋರಾಟಗಳನ್ನು ಮಾಡಿದ್ದಾರೆ. ಇದರ ಫಲವಾಗಿ ಯುಪಿಯ ಸರ್ಕಾರದ ಅವಧಿಯಲ್ಲಿ  371(ಜೆ) ಕಲಂ ಜಾರಿ ಮಾಡಿದೆ. ಈಗ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಹಿಂದೇಟು ಹಾಕುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು 371(ಜೆ) ಕಲಂ ಸಮರ್ಪಕ ಅನುಷ್ಠಾನಗೊಳಿಸದ ಕಾರಣ ಈ ಭಾಗದ ಅನೇಕ ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿಯಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದರು.

ಮಾಜಿ ಶಾಸಕ ಎ. ಪಾಪಾರೆಡ್ಡಿ, ತಾರಾನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಾರಸಮಲ್ ಸುಖಾಣಿ, ಟ್ಯಾಗೋರ್ ಸ್ಮಾರಕ ಸಂಸ್ಥೆಯ ಅಧ್ಯಕ್ಷ ಆರ್ ಕೆ ಅಮರೇಶ, ವಾಣಿಜ್ಯೋದ್ಯಮಿ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕಮಲ್ ಕುಮಾರ, ಕಾಂಗ್ರೆಸ್ ಮುಖಂಡ ರಝಾಕ್ ಉಸ್ತಾದ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಕುಮಾರ ಜೈನ್‌ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.