ADVERTISEMENT

ರಾಯಚೂರು: ಮನೆ ಮಾಲೀಕರನ್ನು ಕಟ್ಟಿಹಾಕಿ ಬಂಗಾರ, ನಗದು ದರೋಡೆ ಮಾಡಿದ ದುಷ್ಕರ್ಮಿಗಳು

ಅಕ್ಕಪಕ್ಕದ ಮನೆಗೆ ಬೀಗ ಹಾಕಿದ ಕಳ್ಳರು; 22 ತೊಲ ಬಂಗಾರ, 2 ಕೆ.ಜಿ ಬೆಳ್ಳಿ ಹಾಗೂ ₹2 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 6:48 IST
Last Updated 15 ಸೆಪ್ಟೆಂಬರ್ 2024, 6:48 IST
ಕಳ್ಳತನ (ಪ್ರಾತಿನಿಧಿಕ ಚಿತ್ರ)
ಕಳ್ಳತನ (ಪ್ರಾತಿನಿಧಿಕ ಚಿತ್ರ)   

ರಾಯಚೂರು: ಇಲ್ಲಿನ ಲಕ್ಷ್ಮೀ ನರಸಿಂಹ ಬಡಾವಣೆಯಲ್ಲಿ ಭಾನುವಾರ ಬೆಳಗಿನ ಜಾವ ಮನೆ ಬಾಗಿಲು ಮುರಿದು ಒಳ ನುಗ್ಗಿದ ದರೋಡೆಕೋರರು ಮನೆ ಮಾಲೀಕರನ್ನು ಕಟ್ಟಿಹಾಕಿ 22 ತೊಲ ಬಂಗಾರ, 2 ಕೆ.ಜಿ ಬೆಳ್ಳಿ ಹಾಗೂ ₹2 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.

ಕಪ್ಪು ಬಣ್ಣದ ಬಟ್ಟೆ ಧರಿಸಿದ ದರೋಡೆಕೋರರ ಗ್ಯಾಂಗ್ ಮನೆಗೆ ನುಗ್ಗುವ ಮುಂಚೆ ಬಡಾವಣೆಯ ಅಕ್ಕಪಕ್ಕದ ಮನೆಗಳಿಗೆ ಹೊರಗೆ ಬೀಗ ಹಾಕಿದ್ದಾರೆ. ಸುತ್ತಮುತ್ತಲಿನ ಬೀದಿ ದೀಪಗಳನ್ನು ಆಫ್ ಮಾಡಿದ್ದಾರೆ.  ನಂತರ ಬಸನಗೌಡ ಅವರ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿ ಹಾಕಿ  ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ದರೋಡೆ ಮಾಡಿದ್ದಾರೆ. ಕಳ್ಳರ ಚಲನವಲನದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದರೋಡೆ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಶ್ಚಿಮ ಪೊಲೀಸ್ ಠಾಣೆ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.

ADVERTISEMENT

ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಬಂದು ಪರಿಶೀಲಿಸಿದರು. ಬೆಳ್ಳಂಬೆಳಿಗ್ಗೆ ನಡೆದ ಈ ಘಟನೆಯಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.